ಬೆಳಗಾವಿ ಜಿಲ್ಲೆಯ ರಸ್ತೆ ಗುಂಡಿಗಳು ಈಗ ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗುತ್ತಿವೆ. ಚಿಕ್ಕೋಡಿಯ ಹತ್ತರವಾಟ್ ಕ್ರಾಸ್ ಬಳಿ ರಸ್ತೆಯ ತಗ್ಗುಗಳನ್ನು ತಪ್ಪಿಸಲು ಹೋದ ಕಾರೊಂದು ನೇರವಾಗಿ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಬಸ್ನಲ್ಲಿದ್ದ ಹತ್ತಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿರುವ ತಗ್ಗು-ಗುಂಡಿಗಳನ್ನು ತಪ್ಪಿಸಲು ಹೋದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಹಾನಿಯಿಲ್ಲದೆ ಪಾರಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

