State

ನಮ್ಮ ಹೈಕಮಾಂಡ್ ಆದಷ್ಟು ಬೇಗ ಎಲ್ಲದಕ್ಕೂ ಉತ್ತರಿಸಲಿದೆ

Share

ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಮತ್ತು ದಲಿತ ಸಿಎಂ ಬೇಡಿಕೆಯ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಕಲಬುರಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್,ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆಗಳ ಮಧ್ಯೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, “ನಮ್ಮ ಹೈಕಮಾಂಡ್ ಶೀಘ್ರದಲ್ಲೇ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಲಿತ ಸಿಎಂ ಬೇಡಿಕೆಯು ಸಾರ್ವಜನಿಕರ ಪ್ರೀತಿ ಮತ್ತು ವಿಶ್ವಾಸದ ಸಂಕೇತವಾಗಿದ್ದು, ಪಕ್ಷದ ಹಿರಿಯ ನಾಯಕತ್ವವು ಎಲ್ಲವನ್ನೂ ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡುವ ವಿಚಾರ ಸೇರಿದಂತೆ ಅಧಿಕಾರ ಹಂಚಿಕೆಯ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಪ್ರತಿಯೊಬ್ಬ ಕಾಂಗ್ರೆಸ್ಸಿಗನೂ ಒಪ್ಪಲೇಬೇಕು ಎಂದು ಪ್ರತಿಪಾದಿಸಿದ ಅವರು, ಸದ್ಯಕ್ಕೆ ತಾವು ದೆಹಲಿಗೆ ಹೋಗುತ್ತಿಲ್ಲವೆಂದು ಸ್ಪಷ್ಟಪಡಿಸಿದರು. 4 ಲಕ್ಷ ಕೋಟಿ ರೂಪಾಯಿ ಬಜೆಟ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದೇವೆ ಎಂದು ತಿಳಿಸಿದ ಅವರು, ಸಿದ್ದರಾಮಯ್ಯನವರು ಐದು ವರ್ಷ ಸಿಎಂ ಆಗಿ ಮುಂದುವರಿಯುವ ಹೇಳಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸುವ ಮೂಲಕ ಕುತೂಹಲ ಕಾಯ್ದಿರಿಸಿದರು.

Tags:

error: Content is protected !!