Vijaypura

ಜನಿವಾರ ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

Share

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಘಟನೆಯನ್ನು ಖಂಡಿಸಿ ವಿಜಯಪುರ ನಗರದಲ್ಲಿ ಬ್ರಾಹ್ಮಣ ಸಮಾಜವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪರೀಕ್ಷೆಯಲ್ಲಿ ಜನಿವಾರಕ್ಕೆ ಅವಮಾನ ಮಾಡಿದ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾಗೊಳಿಸಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಈ ವೇಳೆ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಅರವಿಂದ ಕುಲಕರ್ಣಿ ಅವರು ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕಿತ್ತು ಹಾಕಿದ ಕಾಲೇಜು ಆಡಳಿತ ಮಂಡಳಿಯ ಮೇಲೆ ಕೂಡಲೇ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಘಟನೆ ಇಡೀ ಸಮಾಜಕ್ಕೆ ತಲೆತಗ್ಗಿಸುವಂತದ್ದು, ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.

Tags:

error: Content is protected !!