Chikkodi

ಚಿಕ್ಕೋಡಿಯಲ್ಲಿ ಭೀಕರ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಫರ್ನಿಚರ್ ಅಂಗಡಿ ಸುಟ್ಟು ಭಸ್ಮ!

Share

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಸಿಲಿನ ತಾಪದ ನಡುವೆಯೇ ಫರ್ನಿಚರ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕ್ಷಣಾರ್ಧದಲ್ಲಿಯೇ ಅಂಗಡಿಯಲ್ಲಿದ್ದ ವಸ್ತುಗಳೆಲ್ಲವೂ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ.

ಚಿಕ್ಕೋಡಿ ಪಟ್ಟಣದ ಬೇಪಾರಿ ಗಲ್ಲಿಯಲ್ಲಿರುವ ವಿಲಾಸ್ ಸಾಲಿಮನಿ ಅವರಿಗೆ ಸೇರಿದ ಫರ್ನಿಚರ್ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆರಂಭವಾದ ಬೆಂಕಿ, ನೋಡ ನೋಡುತ್ತಿದ್ದಂತೆಯೇ ಇಡೀ ಅಂಗಡಿಯನ್ನು ವ್ಯಾಪಿಸಿತು. ಬಾಗಿಲು ಮತ್ತು ಕಿಟಕಿ ತಯಾರಿಕೆಗೆ ಬಳಸುತ್ತಿದ್ದ ಲಕ್ಷಾಂತರ ಮೌಲ್ಯದ ಮರಮುಟ್ಟುಗಳು, ಕಚ್ಚಾ ಸಾಮಗ್ರಿಗಳು ಹಾಗೂ ಸಿದ್ಧಪಡಿಸಿದ ಫರ್ನಿಚರ್‌ಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಕರಕಲಾಗಿವೆ.

ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ, ಬೆಂಕಿ ಮತ್ತಷ್ಟು ಹರಡದಂತೆ ಹತೋಟಿಗೆ ತರುವ ಕಾರ್ಯಾಚರಣೆ ನಡೆಸಿದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಆಸ್ತಿ ಪಾಸ್ತಿ ನಷ್ಟದಿಂದ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Tags:

error: Content is protected !!