Dharwad

ಧಾರವಾಡದಲ್ಲಿ ವಿದ್ಯಾಗಿರಿ ಠಾಣೆ ಸಿಬ್ಬಂದಿಯ ಕಿರುಕುಳಕ್ಕೆ ವಿದ್ಯಾರ್ಥಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ.

Share

ಧಾರವಾಡ ವಿದ್ಯಾಗಿರಿ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಸೇರಿ ಡ್ರಗ್ ಟೆಸ್ಟಿಂಗ್ ಸಂದರ್ಭದಲ್ಲಿ ನೆಗೆಟಿವ್ ಬಂದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆಗೆ ಪೊಲೀಸರ ಕಿರುಕುಳವೇ ಕಾರಣವೆಂದು ಆರೋಪಿಸಿ ಹಾಗೂ ಆತ್ಮಹತ್ಯೆಗೆ ಕಾರಣವಾದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ, ಧಾರವಾಡದಲ್ಲಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಆದಿತ್ಯ ಮ್ಯಾಗೇರಿ(20) ಆತ್ಮಹತ್ಯೆಗೆ ಕಾರಣವಾದ ವಿದ್ಯಾಗಿರಿ ಠಾಣೆಯ ಸಿಬ್ಬಂದಿ ವಿರುದ್ಧ ಧಿಕ್ಕಾರ ಲೂಗಿ ಆಕ್ರೋಶ ಹೊರಹಾಕಿದರು. ಕಳೆದ ಶನಿವಾರದಂದು ಡ್ರಗ್ ಸೇರಿ ಗಾಂಜಾ ಟೆಸ್ಟಿಂಗ್‌ಗಾಗಿ ಆತ್ಮಹತ್ಯೆ ಮಾಡಿಕೊಂಡ ಆದಿತ್ಯನನ್ನು ವಿದ್ಯಾಗಿರಿ ಠಾಣೆಯ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು. ಟೆಸ್ಟಿಂಗ್ ನಡೆಸಿದ ನಂತರ ಆದಿತ್ಯ ಗಾಂಜಾ, ಡ್ರಗ್ ನೆಗಟಿವ್ ವರದಿ ಬಂದಿತ್ತು. ಆದರೆ ಆದಿತ್ಯನ ವರದಿ ನೆಗಟಿವ್ ಬಂದರು ಕೂಡಾ ಪೊಲೀಸ್ ಸಿಬ್ಬಂದಿ ಮಧ್ಯವರ್ತಿಗಳ ಮೂಲಕ ಎರಡು ಸಾವಿರಕ್ಕೆ ನಿರಂತರವಾಗಿ ಬೇಡಿಕೆ ಇಟ್ಟಿದ್ದಾರೆ. ಈ ಕಿರುಕುಳದಿಂದ ಬೇಸತ್ತ ಧಾರವಾಡ ಕಿಟೆಲ್ ಕಾಕೇಜಿನ ಬಿಎಸ್ಸಿ ವಿದ್ಯಾರ್ಥಿ ಆದಿತ್ಯ ಆತ್ಮಹತ್ಯೆ ಶರಣಾಗಿದ್ದಾನೆ. ಈ ಕೂಡಲೇ ಆದಿತ್ಯ ಆತ್ಮಹತ್ಯೆಗೆ ಕಾರಣವಾಗಿರುವ ವಿದ್ಯಾಗಿರಿ ಠಾಣೆಯ ಸಿಬ್ಬಂದಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲಾವಾದಲ್ಲಿ ಉಗ್ರ ಹೋರಾಟದ ಕಡೆ ಹೆಜ್ಜೆ ಇಡುವುದಾಗಿ ಎಚ್ಚರಿಕೆ ನೀಡಿದರು.‌

Tags:

error: Content is protected !!