BELAGAVI

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಅಧಿಕಾರಿಗಳ ನೀತಿಗೆ ಆಕ್ರೋಶ

Share

ರಾಜ್ಯಾದ್ಯಂತ ನಡೆಯುತ್ತಿರುವ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುತ್ತಿರುವ ಅಧಿಕಾರಿಗಳ ಕ್ರಮ ಈಗ ವಿವಾದಕ್ಕೆ ಈಡುಮಾಡಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ಅಧಿಕಾರಿಗಳ ನೀತಿಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಮಹಾಸಭೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಇಂದು ಬೆಳಗಾವಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಮಹಾಸಭೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ನೀತಿಯನ್ನು ಖಂಡಿಸಲಾಯಿತು.

ಕಳೆದ ವರ್ಷದಿಂದ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸುವ ಪದ್ಧತಿ ಆರಂಭಗೊಂಡಿದೆ. ಸಂಪೂರ್ಣ ಕರ್ನಾಟಕದಲ್ಲಿ ಕಳೆದ ಬಾರಿಯೂ ಪ್ರತಿಭಟನೆ ನಡೆಸಲಾಗಿತ್ತು. ಅಧಿಕಾರಿಗಳು ದುರ್ಬುದ್ಧಿ ದ್ವೇಷದ ಭಾವನೆಯನ್ನು ಹೊಂದಿದ್ದಾರೇನು ಎಂಬ ಭಾವನೆ ಮೂಡತೊಡಗಿದೆ. ಜನಿವಾರವನ್ನು ಕೇವಲ ಬ್ರಾಹ್ಮಣರು ಧರಿಸುವುದಿಲ್ಲ. ಕ್ಷತ್ರೀಯರು, ವೈಶ್ಯರು, ಜೈನರು, ಲಿಂಗಾಯಿತರು ಎಲ್ಲರೂ ಧರಿಸುತ್ತಾರೆ. ಎಲ್ಲ ಸಮಾಜದವರು ಇದರ ವಿರುದ್ಧ ಪ್ರತಿಭಟಿಸಬೇಕು. ಅಲ್ಲದೇ ಮಂಗಳಸೂತ್ರ, ಬಳೆ ತೆಗೆಯಿರಿ ಎಂದು ಹೇಳಲಾಗುತ್ತಿದೆ. ಬಾಬಾಸಾಹೇಬರು ಸಂವಿಧಾನದಲ್ಲಿ ಎಲ್ಲ ಧರ್ಮದವರಿಗೆ ಹಕ್ಕುಗಳನ್ನು ನೀಡಿದ್ದಾರೆ. ಸಿಇಟಿ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭೆಯ ಜಿಲ್ಲಾಧ್ಯಕ್ಷ ಜಯತೀರ್ಥ ಸವದತ್ತಿ ಅವರು ಆಗ್ರಹಿಸಿದರು.

ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!