Chikkodi

ಮಹಿಳಾ ಮೀಸಲಾತಿ ಜಾರಿಗೊಳಿಸಿ: ಪ್ರಿಯಾಂಕಾ ಜಾರಕಿಹೊಳಿ

Share

:ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ್ ಮಸೂದೆಯ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು.

ಚಿಕ್ಕೋಡಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ರಾಜೀವ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ತರಲಾಗಿತ್ತು. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಿಡಿಕಾರಿದರು.

ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ತರುವ ಮಸೂದೆಯನ್ನು ತರಾತುರಿಯಲ್ಲಿ
ಮಾಡಿಕೊಟ್ಟಿದೆ. ಮಂಡಿಸಿದ್ದು ಸಂಶಯಕ್ಕೆ ಎಡೆ ಮಣಿಪುರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೂ ಅದನ್ನು ವಿರೋಧಿಸುವ ಗೋಜಿಗೆ ಹೋಗದ ಬಿಜೆಪಿಯ ಮಹಿಳೆಯರ ಕಾಳಜಿ ತೋರುವ ಬಣ್ಣ ಕಳಚಿದಂತಾಗಿದೆ ಎಂದರು.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರದ ಕ್ರಮ ಸಂಶಯಕ್ಕೆ ಎಡೆ ಮಾಡಿಕೊಡುವಂತಿತ್ತು. ಹೀಗಾಗಿಯೇ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಸಿದ್ದವು. ಕಾಂಗ್ರೆಸ್ ಮಹಿಳೆಯರ ಪರವಾಗಿದೆ ಎಂಬುವದಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕೋಡಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ, ಗಣೇಶ ಮೋಹಿತೆ, ಮುಖಂಡ ಪ್ರಭಾಕರ ಐ.ಕೋರೆ, ತನುಜಾ ಸಿಂಗೆ, ಲಕ್ಷ್ಮೀ ಪಾಟೀಲ, ರೇಖಾ ದಾದುಗೋಳ, ರಾಜು ಕೊಟಗಿ ಮುಂತಾದವರು ಇದ್ದರು.

Tags:

error: Content is protected !!