Vijaypura

ಎಸ್ ಸಿ ಎಸ್ ಟಿ ಕುಂದು ಕೊರತೆ ಪ್ರಗತಿ ಪರಿಶೀಲನಾ ಸಭೆ

Share

ವಿಜಯಪುರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಆಯೋಗದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾರ್ವಜನಿಕರ ಕುಂದುಕೊರತೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ದಲಿತ ಮುಖಂಡರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲಿನ ದಬ್ಬಾಳಿಕೆಗಳನ್ನು ತಡೆಗಟ್ಟಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಲ್ಲದೆ, ನಕಲಿ ಜಾತಿ ಪ್ರಮಾಣಪತ್ರ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

Tags:

error: Content is protected !!