Dharwad

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹ ಧಾರವಾಡ ಗ್ರಾಮೀಣ ಕ್ಷೇತ್ರ ಈಗ ಖಾಲಿ

Share

• ಏಪ್ರಿಲ್ 15 ರಿಂದಲೇ ಆದೇಶ ಜಾರಿ
• ಆರು ವರ್ಷಗಳ ಕಾಲ ಚುನಾವಣಾ ನಿಷೇಧ

ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಅಪರಾಧಿ ಎಂದು ಪರಿಗಣಿಸಲ್ಪಟ್ಟ ಹಿನ್ನೆಲೆಯಲ್ಲಿ, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂಬುವುದು ವಿಧಾನಸಭೆ ಕಾರ್ಯದರ್ಶಿಗಳ ಅದೇಶದಿಂದ ತಿಳಿದು ಬಂದಿದೆ.

ಈ ಕುರಿತು ಆದೇಶ ಹೊರಡಿಸಿರುವ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಗಳು, ಧಾರವಾಡ ಗ್ರಾಮೀಣ ಕ್ಷೇತ್ರ-71 ಖಾಲಿಯಾಗಿದೆ. ವಿನಯ್ ಕುಲಕರ್ಣಿ ದೋಷಿ ಎಂದು ಘೋಷಿಸಿದ ಪರಿಣಾಮವಾಗಿ, ಅವರು ಶಿಕ್ಷೆಗೊಳಗಾದ ದಿನಾಂಕದಿಂದ ಅಂದರೆ ಏಪ್ರಿಲ್ 15, 2026 ರಿಂದ ಕರ್ನಾಟಕ ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ಭಾರತ ಸಂವಿಧಾನದ 191(1)(e) ವಿಧಿಯ ನಿಬಂಧನೆಗಳ ಪ್ರಕಾರ ಮತ್ತು ಅಂತಹ ಅನರ್ಹತೆಯು ಅವರ ಬಿಡುಗಡೆಯ ನಂತರ ಆರು ವರ್ಷಗಳ ಅವಧಿಗೆ ಮುಂದುವರಿಯುತ್ತದೆ. ಆದರೆ ಸಮರ್ಥ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡದ ಹೊರತು. ಆದ್ದರಿಂದ, ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

 

Tags:

error: Content is protected !!