ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೇ 24 ರಂದು ವಿಜಯಪುರದಲ್ಲಿ ಸಮಾವೇಶ

500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅದ್ದೂರಿ ಸನ್ಮಾನ
ಡಾ. ಸುರೇಶ ಬಿರಾದಾರ ನೇತೃತ್ವದಲ್ಲಿ ಸಮಾಜ ಸಂಘಟನೆ
ಆ್ಯಂಕರ್: ವಿಜಯಪುರ ಜಿಲ್ಲೆಯ ಪಂಚಮಸಾಲಿ ಸಮಾಜದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭವ್ಯ ಸನ್ಮಾನ ಕಾರ್ಯಕ್ರಮನ್ನು ಹಮ್ಮಿಕೊಳ್ಳಲು ಆಯೋಜಿಸಲಾಗಿದೆ ಎಂದು ಪಂಚಮಸಾಲಿ ಮುಖಂಡ ಹಾಗೂ ಶಾಂತಿನಿಕೇತನ ಟ್ರಸ್ಟ್ ಅಧ್ಯಕ್ಷರಾದ ಡಾ.ಸುರೇಶ ಬಿರಾದಾರ ತಿಳಿಸಿದರು.
ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ಪಂಚಮಸಾಲಿ ಸಮಾಜವನ್ನು ಮತ್ತಷ್ಟು ಸಂಘಟಿತಗೊಳಿಸುವ ಜೊತೆಗೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ವಿಜಯಪುರದಲ್ಲಿ ಭವ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಕೇಂದ್ರೀಯ ವಿದ್ಯಾಲಯ ಹಾಗೂ ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸಮಾಜದಲ್ಲಿ ಶಿಕ್ಷಣದ ಮಹತ್ವ ಹೆಚ್ಚಿಸುವ ಚಿಂತನೆ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ದಿನಾಂಕ 24-05-2026 ರಂದು ವಿಜಯಪುರ ನಗರದ ಕಿತ್ತೂರ ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಯಲ್ಲಿ 90% ಕ್ಕಿಂತ ಹೆಚ್ಚು ಹಾಗೂ ಕೇಂದ್ರೀಯ ವಿದ್ಯಾಲಯ ಮತ್ತು ಸಿಬಿಎಸ್‌ಇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನ ವಿದ್ಯಾರ್ಥಿಗಳ ಸಂಪರ್ಕ ಸಾಧಿಸಲು ಸಂಯೋಜಕರ ನೇಮಕ ಮಾಡಲಾಗುವದು ಎಂದು ತಿಳಿಸಿದರು., ವಿದ್ಯಾರ್ಥಿಗಳು ಅಂಕಪಟ್ಟಿಗಳನ್ನು ವಾಟ್ಸಪ್ ಮೂಲಕ ಕಳುಹಿಸಲು ಮನವಿ ಮಾಡಲಾಗಿದೆ. ಸುಮಾರು 400 ರಿಂದ 500 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವ ಗುರಿ ಹೊಂದಲಾಗಿದೆ.
ಈ ಮಹತ್ವದ ಕಾರ್ಯಕ್ರಮದ ಮೂಲಕ ಪಂಚಮಸಾಲಿ ಸಮಾಜದಲ್ಲಿ ಶಿಕ್ಷಣ, ಸಂಘಟನೆ ಮತ್ತು ಸಾಧಕರಿಗೆ ಗೌರವ ಸಲ್ಲಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. ಮಾದ್ಯಮಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಹೊನ್ನಮಲ್ಲ ಸಾರವಾಡ, ಅಶೋಕ ಬಿರಾದಾರ, ಬಸವರಾಜ ಕಳಸಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೈಟ್:
