ಎರಡೂ ಉಪಚುನಾವಣಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ

ಫಲಿತಾಂಶದ ನಂತರ ಬಿಜೆಪಿ ನಾಯಕರಿಗೆ ಸಂಕಷ್ಟ

ವಿಜಯೇಂದ್ರ-ಯತ್ನಾಳ್ ವಿರುದ್ಧ ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ
ಚಾಪಿ ಕಿತ್ತುಕೊಂಡು ಹೋಗುತ್ತಾರೆಂದು ಸಚಿವರ ವ್ಯಂಗ್ಯ
ಆ್ಯಂಕರ್: ಬಹು ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣಾ ಫಲಿತಾಂಶದ ಬಗ್ಗೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಸಚಿವ ಎಂ. ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಾಗಲಕೋಟೆಯಲ್ಲಿ ಗೆದ್ದ ನಂತರ ಏನಾಗುತ್ತದೆ ಎಂದು ಹೇಳಿರುವುದಾಗಿ ತಿಳಿಸಿದ ಅವರು, ಇಬ್ಬರು ಎಂದರೆ ವಿಜಯೇಂದ್ರ ಹಾಗೂ ಯತ್ನಾಳ ಒಟ್ಟಿಗೆ ಚಾಪಿ ಕಿತ್ತುಕೊಂಡು ಹೋಗುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಯಾರ್ಯಾರು ಎಂದು ಪತ್ರಕರ್ತರು ಕೇಳಿದಾಗ, ಸಚಿವರು ಪತ್ರಕರ್ತರನ್ನೇ ಪ್ರಶ್ನಿಸಿದರು.
