State

ಗ್ಯಾಸ್ ದರ ಏರಿಕೆ ಬಿಸಿ: ಕೇಂದ್ರದ ವಿರುದ್ಧ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಆಕ್ರೋಶ

Share

• ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಏರಿಕೆ
• ಬೆಲೆ ಏರಿಕೆಗೆ ಸಚಿವ ಮುನಿಯಪ್ಪ ಆಕ್ರೋಶ
• ದರ ಇಳಿಸಲು ಕೇಂದ್ರಕ್ಕೆ ಪತ್ರ ಸಲ್ಲಿಕೆ
• ತಕ್ಷಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಒತ್ತಾಯ

ದೇಶದಲ್ಲಿ ವಾಣಿಜ್ಯ ಮತ್ತು ಆಟೋ ಎಲ್‌ಪಿಜಿ ದರ ಏರಿಕೆಯಾಗಿರುವುದು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಲೆ ಏರಿಕೆ ಖಂಡಿಸಿರುವ ರಾಜ್ಯ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಕೇಂದ್ರ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ವಾಣಿಜ್ಯ ಬಳಕೆ ಹಾಗೂ ಆಟೋ ಗ್ಯಾಸ್ ದರ ಏರಿಕೆಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಬೆಲೆ ಏರಿಕೆ ಮಾಡದಂತೆ ರಾಜ್ಯ ಸರ್ಕಾರ ಮೊದಲೇ ಕೇಂದ್ರಕ್ಕೆ ಮನವಿ ಮಾಡಿತ್ತು ಎಂದು ತಿಳಿಸಿದ್ದಾರೆ. “ಗ್ಯಾಸ್ ದರ ಏರಿಸದಂತೆ ನಾನು ವೈಯಕ್ತಿಕವಾಗಿ ಕೇಳಿಕೊಂಡಿದ್ದೆ, ಅಷ್ಟೇ ಅಲ್ಲದೆ ಮುಖ್ಯಮಂತ್ರಿಗಳ ಮೂಲಕವೂ ಅಧಿಕೃತ ಪತ್ರ ಬರೆಸಿ ಒತ್ತಾಯಿಸಲಾಗಿತ್ತು. ಆದರೂ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ. ಜನಸಾಮಾನ್ಯರ ಹಿತದೃಷ್ಟಿಯಿಂದ ಕೇಂದ್ರವು ತಕ್ಷಣವೇ ಮಧ್ಯಪ್ರವೇಶಿಸಿ ಈ ಏರಿಕೆಯನ್ನು ಸರಿಪಡಿಸಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.

Tags:

error: Content is protected !!