• ದಾವಣಗೆರೆ ದಕ್ಷಿಣದಲ್ಲಿ ಅರಳಿದ ಕೈ ಪಡೆ
• ತಾತನ ಭದ್ರಕೋಟೆ ಉಳಿಸಿಕೊಂಡ ಮೊಮ್ಮಗ ಸಮರ್ಥ್
• ಕಾಂಗ್ರೆಸ್ ಅಭ್ಯರ್ಥಿಗೆ 5,708 ಮತಗಳ ಗೆಲುವು
• ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ಅಶ್ವಮೇಧ ಯಾಗ

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್ ಮರಳಿ ತೆಕ್ಕೆಗೆ ಪಡೆದಿದೆ.
ಕಾಂಗ್ರೆಸ್ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ 5,708 ಮತಗಳ ಅಂತರಿಂದ ಜಯ ಸಾಧಿಸಿದ್ದಾರೆ. ಸಮರ್ಥ್ ಶಾಮನೂರುಗೆ 69,578 ಮತಗಳು ಬಿದ್ದಿದ್ದರೆ, ಶ್ರೀನಿವಾಸ ಟಿ.ದಾಸ ಕರಿಯಪ್ಪ 63,870 ಮತಗಳನ್ನು ಪಡೆದಿದ್ದಾರೆ. ಇನ್ನು ಎಸ್ಡಿಪಿಐನ ಅಫ್ಸರ್ ಕೊಡ್ಲಿಪೇಟೆಗೆ 18975 ಮತಗಳು ಮತ್ತು ನೋಟಾಗೆ 511 ಮತಗಳು ಚಲಾವಣೆಯಾಗಿವೆ.
ಜನತೆಯ ಆರ್ಶೀವಾದ ನಮ್ಮ ಕುಟುಂಬದ ಮೇಲಿದೆ. ಕಾರ್ಯಕರ್ತರು ಅತ್ಯಂತ ಉತ್ಸಾಹಯುತವಾಗಿ ಮತ್ತು ಅಭಿಮಾನದಿಂದ ಕೆಲಸ ಮಾಡಿದ್ದಾರೆ. ಸಮರ್ಥ ಅವರ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಕಾಂಗ್ರೆಸ್ ಭದ್ರಕೋಟೆ ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿದಿದೆ ಎಂದು ಶಾಮನೂರು ಶಿವಶಂಕಪ್ಪನವರ ಮಗ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ಬೈಟ್
ಸಮರ್ಥ್ ಶಾಮನೂರು ಗೆಲುವಿನ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
