Banglore

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹವಾ: ಬೆಂಗಳೂರಿನಲ್ಲಿ ರಿಜ್ವಾನ್ ಹರ್ಷದ್ ಬೆಂಬಲಿಗರ ಸಂಭ್ರಮ

Share

• ದಾವಣಗೆರೆ ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಜಯ
• ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮ
• ರಿಜ್ವಾನ್ ಹರ್ಷದ್ ಬೆಂಬಲಿಗರಿಂದ ಭರ್ಜರಿ ವಿಜಯೋತ್ಸವ
• ಸಿಹಿ ಹಂಚಿ ಪಟಾಕಿ ಸಿಡಿಸಿದ ಬೆಂಬಲಿಗರು

ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಶಾಸಕ ರಿಜ್ವಾನ್ ಹರ್ಷದ್ ಬೆಂಬಲಿಗರು ವಿಜಯೋತ್ಸವ ಆಚರಿಸುತ್ತಿದ್ದಾರೆ.
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಶಾಸಕ ರಿಜ್ವಾನ್ ಹರ್ಷದ್ ಬೆಂಬಲಿಗರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ದಾವಣಗೆರೆ ಉಪಚುನಾವಣೆಯ ಗೆಲುವಿನ ಹಿಂದೆ ರಿಜ್ವಾನ್ ಹರ್ಷದ್ ಅವರ ಪರಿಶ್ರಮ ದೊಡ್ಡದಿದೆ ಎಂದು ಘೋಷಣೆ ಕೂಗಿದ ಬೆಂಬಲಿಗರು, ಶಾಸಕರ ಭಾವಚಿತ್ರ ಹಿಡಿದು ಜೈಕಾರ ಹಾಕಿದರು. ಕಚೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ನೆರೆದಿದ್ದವರಿಗೆ ಸಿಹಿ ಹಂಚುವ ಮೂಲಕ ಕಾರ್ಯಕರ್ತರು ಪರಸ್ಪರ ಸಂಭ್ರಮ ಹಂಚಿಕೊಂಡರು. ರಿಜ್ವಾನ್ ಹರ್ಷದ್ ಅವರನ್ನು ಗೆಲುವಿನ ರುವಾರಿ ಎಂದು ಬಣ್ಣಿಸಿದ ಬೆಂಬಲಿಗರ ದಂಡು, ಈ ಜಯ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:

error: Content is protected !!