ಪಂಚರಾಜ್ಯ ಚುನಾವಣೆ ಫಲಿತಾಂಶ ನಮ್ಮ ರಾಜ್ಯದ ಮೇಲೆ ಪ್ರಭಾವ ಬೀರುವುದಿಲ್ಲ; ಸಚಿವ ಎಂ.ಬಿ.ಪಾಟೀಲ ಸ್ಪಷ್ಟನೆ

ಪಂಚರಾಜ್ಯ ಚುನಾವಣೆ ಫಲಿತಾಂಶ ನಮ್ಮ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ವಿಜಯಪುರದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ನಮ್ಮ ರಾಜ್ಯದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಿದೆ. ‘ಗ್ಯಾರಂಟಿ’ ಯೋಜನೆಗಳ ಮೂಲಕ ಜನರ ಮನಸ್ಸನ್ನು ಗೆದ್ದಿದ್ದೇವೆ. ಆದ್ದರಿಂದ, ಆ ಫಲಿತಾಂಶಗಳು ಇಲ್ಲಿ ನಮಗೆ ಯಾವುದೇ ತೊಂದರೆ ಉಂಟುಮಾಡುವುದಿಲ್ಲ ಎಂದು ಅವರು ಹೇಳಿದರು. ಇನ್ನೂ ಉಪಚುನಾವಣೆಯಲ್ಲಿ ಕಾಂಗ್ರೆಸ ಗೆಲುವು ಎಂ ಬಿ ಪಾಟೀಲ ಪ್ರತಿಕ್ರಿಯೆ ನೀಡಿ ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಮತದಾರರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ, ಶಾಸಕ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ‘ಗಂಟು ಮೂಟೆ ಕಟ್ಟಬೇಕಾ’ ಎಂದು ಪ್ರಶ್ನಿಸಿದರು. ಈ ಗೆಲುವು ಮತದಾರರ ಬೆಂಬಲವನ್ನು ತೋರಿಸುತ್ತದೆ ಎಂದು ತಿಳಿಸಿದರು.ಇನ್ನೂ ತಮಿಳುನಾಡಿನ ದಳಪತಿ ವಿಜಯವಾಡ ಟಿವಿಕೆ ಪಕ್ಷವು ಚುನಾವಣೆಯಲ್ಲಿ ಅದ್ಭುತ ಗೆಲುವು ಸಾಧಿಸಿರುವುದು ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತದಿಂದ ಜನರು ಬೇಸತ್ತಿದ್ದು, ಹೀಗಾಗಿ ಬೇರೆ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ ಎಂದು ಅವರು ತಿಳಿಸಿದರರು. ಇನ್ನೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಲಿಂಗಾಯತ ಸಮಾಜದ ಹಿರಿಯ ನಾಯಕರಾಗಿದ್ದು, ಅವರಿಗೆ ಅಭಿಮಾನಿ ಉತ್ಸವ ಹಮ್ಮಿಕೊಂಡಿರುವುದು ಸಂತಸ ತಂದಿದೆ ಎಂದರು. 50 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸುತ್ತಿರುವುದು ವೈಯಕ್ತಿಕವಾಗಿಯೂ ಖುಷಿ ತಂದಿದೆ ಎಂದು ತಿಳಿಸಿದರು.
