Chikkodi

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

Share

• ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ಧಾರುಣ ಘಟನೆ
• ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
• ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ
• ತಡರಾತ್ರಿ ಬಾವಿಯಿಂದ ಮೃತದೇಹ ಹೊರಕ್ಕೆ

ಕಾಲು‌ ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಜಹಾಂಗೀರ ಸರ್ದಾರ್ ಪಟೇಲ (ವಯಸ್ಸು 50) ಎಂದು ಗುರುತಿಸಲಾಗಿದೆ.
ಜಹಾಂಗೀರ್ ಪಟೇಲ್ ಬೆಳೆಗಳಿಗೆ ನೀರುಣಿಸಲು ಹೊಲಕ್ಕೆ ಹೋಗಿದ್ದರು. ಬಾವಿ ಹತ್ತಿರ ಹೋದಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದಾರೆ. ತಡವಾದರೂ ಮನೆಗೆ ಆಗಮಿಸದ ಹಿನ್ನಲೆಯಲ್ಲಿ ಸಂಬಂಧಿಕರು ಬಾವಿಯ ಬಳಿಗೆ ಧಾವಿಸಿದರು. ಬಳಿಕ ಬಾವಿಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ, ಕರೋಶಿ ಗ್ರಾಮಸ್ಥರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು.
ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಪೊಲೀಸರು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಆಗಮಿಸಿದರು. ರಾತ್ರಿ 11 ಗಂಟೆ ಸುಮಾರಿಗೆ ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಶವವನ್ನು ಹೊರತೆಗೆದರು.

ಮೃತದೇಹವನ್ನು ಶವಪರೀಕ್ಷೆಗಾಗಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಹಾಂಗೀರ್ ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳು ಹೊಂದಿದ್ದಾರೆ.

Tags:

error: Content is protected !!