State

ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಉಪಚುನಾವಣೆ ಗೆಲುವಿನ ಸಂಭ್ರಮ ನಾಯಕತ್ವ ಬದಲಾವಣೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ; ಸಿಎಂ ಸಿದ್ಧರಾಮಯ್ಯ

Share

• ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಭೇಟಿ
• ಉಪಚುನಾವಣೆ ಗೆಲುವು ಸರ್ಕಾರದ ಆಡಳಿತಕ್ಕೆ ಸಾಕ್ಷಿ
• ವಿಪಕ್ಷಗಳ ಯಾವುದೇ ಕುತಂತ್ರಗಳು ಇಲ್ಲಿ ನಡೆಯಲಿಲ್ಲ
• ನಾಯಕತ್ವ ಬದಲಾವಣೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ
ಮೈಸೂರಿಗೆ ಎರಡು ದಿನಗಳ ಪ್ರವಾಸಕ್ಕಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಗೆಲುವು ಸರ್ಕಾರದ ಆಡಳಿತಕ್ಕೆ ಜನ ನೀಡಿದ ಆಶೀರ್ವಾದ ಎಂದು ಹರ್ಷ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ ಸಿಎಂ ಅವರಿಗೆ ಸ್ಥಳೀಯ ನಾಯಕರು ಹಾಗೂ ಜನಪ್ರತಿನಿಧಿಗಳು ಸಾಥ್ ನೀಡಿದರು. ಇಂದು ಕಲಾಮಂದಿರದಲ್ಲಿ ಆಯೋಜಿಸಿರುವ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಆಗಮಿಸಿದ್ದು, ಎರಡು ದಿನಗಳ ಕಾಲ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವನ್ನು ಸಮರ್ಥಿಸಿಕೊಂಡರು. “ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ನಮ್ಮ ಆಡಳಿತದ ಮೇಲೆ ವಿಶ್ವಾಸವಿಟ್ಟು ಜನ ನಮಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ವಿರೋಧ ಪಕ್ಷಗಳ ಯಾವುದೇ ಷಡ್ಯಂತ್ರ ಇಲ್ಲಿ ಕೆಲಸ ಮಾಡಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಅದೆಲ್ಲಾ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ, ಹೈಕಮಾಂಡ್ ಸೂಚನೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದರು.

Tags:

error: Content is protected !!