Dharwad

ಧಾರವಾಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಲಾರಿ, ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Share

ಚಾಲಕನ ನಿಯಂತ್ರಣ ತಪ್ಪಿ ಇಟ್ಟಿಗೆ ಸಾಗಿಸುತ್ತಿದ್ದ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು, ಬಳಿಕ ಕಂದಕ್ಕೆ ಉರುಳಿದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಬಳಿ ಸಂಭವಿಸಿದೆ.

ಸವದತ್ತಿ ಕಡೆಯಿಂದ ಶಿಬಾರಗಟ್ಟಿಗೆ ಚೇರಾ ಇಟ್ಟಿಗೆಗಳ್ನು ಹೊತ್ತೊಯ್ಯುತ್ತಿದ್ದ ಲಾರಿಯ ಎಕ್ಸಲ್ ಕಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿಯು ಯಾದವಾಡ ರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕ್ಲೀನರ್ ಒಬ್ಬರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Tags:

error: Content is protected !!