• ಸಚಿವ ಡಿ ಸುಧಾಕರ್ ನಿಧನಕ್ಕೆ ಶೋಕ
• ಎಂ ಬಿ ಪಾಟೀಲ್ ತೀವ್ರ ಸಂತಾಪ
• ರಾಜ್ಯಕ್ಕೆ ಒಬ್ಬ ಸಜ್ಜನ ನಾಯಕನ ನಷ್ಟ
• ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ

ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ನನ್ನ ಆತ್ಮೀಯರೂ ಆದ ಡಿ. ಸುಧಾಕರ್ ಅವರ ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.
ಮಾಧ್ಯಮ ಪ್ರಕಟಣೆಯ ಮೂಲಕ ಈ ವಿಷಯ ತಿಳಿಸಿರುವ ಸಚಿವರು, “ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸುಧಾಕರ್ ಅವರು ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಸರಳತೆ, ಸೌಜನ್ಯ ಹಾಗೂ ಕಾಳಜಿಯಿಂದ ಜನರ ಮನ ಗೆದ್ದಿದ್ದರು. ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಸೇವಾ ಮನೋಭಾವದಿಂದ ಅವರು ಸದಾ ಸ್ಮರಣೀಯರಾಗಿರುತ್ತಾರೆ” ಎಂದು ತಿಳಿಸಿದ್ದಾರೆ.
“ಸುಧಾಕರ್ ಅವರ ಅಗಲಿಕೆಯಿಂದ ರಾಜ್ಯಕ್ಕೆ ಅಪಾರ ನಷ್ಟ ಉಂಟಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಬಂಧು-ಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ” ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

