Chitradurga

ಪಂಚಭೂತಗಳಲ್ಲಿ ಸಚಿವ ಡಿ. ಸುಧಾಕರ್ ಲೀನ…

Share

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ನಿಧನರಾದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಅವರ ಸ್ವಕ್ಷೇತ್ರ ಹಿರಿಯೂರಿಗೆ ತಂದು ಅಲ್ಲಿ ಸಾರ್ವಜನಿಕ ದರ್ಶನಕ್ಕಿಟ್ಟು ಬಳಿಕ ಚಳ್ಳಕೆರೆಯ ಅವರ ಸ್ವಗೃಹಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಇಂದು ಚಳ್ಳಕೆರೆಯ ಸುಧಾಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆಯ ಜೈನ್ ಚಿತಾಗಾರದಲ್ಲಿ ಜೈನ್ ಸಂಪ್ರದಾಯದಂತೆ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಿಲಾಯಿತು. ಡಿ.ಸುಧಾಕರ್ ಚಿತೆಗೆ ಪುತ್ರ ಸುಹಾಸ್ ಅಗ್ನಿಸ್ಪರ್ಶ ಮಾಡಿದರು. ಸುಧಾಕರ್ ಅವರ ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರುಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಎಚ್.ಕೆ. ಪಾಟೀಲ್, ಎಂ.ಬಿ.ಪಾಟೀಲ್, ಜಿ. ಪರಮೇಶ್ವರ, ಸಭಾಪತಿಗಳಾದ ಯು.ಟಿ. ಖಾದರ್ ಫರೀದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಸ ಚಿವರು, ಶಾಸಕರು, ಸಂಸದರು ಸೇರಿದಂತೆ ರಾಜಕೀಯ ಮುಖಂಡರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಸಚಿವ ಸುಧಾಕರ್

 

ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದು, ಇಂದು ಚಿತುದುರ್ಗ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಡವರ ಬಂಧು ಎಂದು ಹೆಸರಾಗಿದ್ದ ಸಚಿವ ಡಿ. ಸುಧಾಕರ್ ದೀನದಲಿತರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಎಲ್ಲ ರಾಜಕೀಯ ನೇಕಾರರು, ಗಣ್ಯರು ದುಃಖ ವ್ಯಕ್ತಪಡಿಸಿದ್ದಾರೆ

Tags:

error: Content is protected !!