Vijaypura

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಮೆಕ್ಕೆಜೋಳ ಜಮೀನು ಭಸ್ಮ

Share

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳದ ಬೆಳೆ ಬೆಂಕಿಗಾಹುತಿಯಾಗಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹಿರೇಮಸಳಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಪುತಳಾಬಾಯಿ ಈರಪ್ಪ ವಾಲಿಕಾರ ಅವರ ಜಮೀನಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಸುಮಾರು 4 ಎಕರೆ ಮೆಕ್ಕೆಜೋಳ ಬೆಂಕಿ-ಯಿಂದ ಹಾನಿಗೀಡಾಗಿದೆ. ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಂಡಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೆಕ್ಕೆಜೋಳ ತೋಟಕ್ಕೆ ಬೆಂಕಿ ಹತ್ತಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಸುಟ್ಟು ಕರಕಲಾಗಿದೆ. ವಿದ್ಯುತ್ ಇಲಾಖೆಯ ನಿರ್ಲಕ್ಷದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ರೈತ ಪುತಳಬಾಯಿ ಈರಪ್ಪ ವಾಲಿಕಾ‌ರ್ ಆರೋಪಿಸಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಮತ್ತು ಹೇಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags:

error: Content is protected !!