Chikkodi

ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಿ:ಬಿ.ಆರ್.ಪಾಟೀಲ

Share

ಭೀಕರವಾದ ಬಿಸಿಲಿನಿಂದ ಚಿಕ್ಕೋಡಿ -ಹುಕ್ಕೇರಿ ತಾಲೂಕಿನ ಕೆಲ ಹಳ್ಳಿಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದ್ದು,ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ರೈತ ಸಂಘದ ಮುಖಂಡರಾದ ಬಿ.ಆರ್.ಪಾಟೀಲ ಒತ್ತಾಯಿಸಿದರು.

ಅವರು ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮ ಪಂಚಾಯತ ಆವರಣದಲ್ಲಿ ‌ತಹಶೀಲ್ದಾರ ರಾಜೇಶ್ ಬುರ್ಲಿಯವರಿಗೆ ತಾಲೂಕಾಡಳಿತದಿಂದ ಕುಡಿಯುವ ನೀರು ಒದಗಿಸುವಂತೆ ಮನವಿ ಮಾಡಿ ಮಾಧ್ಯಮಗಳ ಜೊತೆಗೆ ‌ಮಾತನಾಡಿದರು ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲೂಕಿನ ಸುಮಾರು ಗ್ರಾಮಗಳಲ್ಲಿ ಈ ಬಾಗದಲ್ಲಿ ಮುಂಗಾರು ಮಳೇಯ ಅಭಾವದಿಂದ ಬರಗಾಲ ಪರಿಸ್ಥಿತಿ ಉಂಟಾಗಿದೆ ಆದ್ದರಿಂದ ಬಿಸಿಲು ಮತ್ತು ತಾಪಮಾನ ಹೆಚ್ಚಾಗಿರುವುದರಿಂದ ದನ-ಕರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ನೀರಿನ ಕೊರತೆ ಇದೆ.

ಸದ್ಯ ಬರಗಾಲ ಪರಿಸ್ಥಿತಿ ಉಂಟಾಗಿದೆ ಆದ್ದರಿಂದ ಬಿಸಿಲು ಮತ್ತು ತಾಪಮಾನ ಹೆಚ್ಚಾಗಿರುವುದರಿಂದ ಜನ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ನೀರಿನ ಕೊರೆತೆ ಸಮಸ್ಯೆವಿದ್ದು,ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಪಶುಸಂಗೋಪನೆ ನಡೆಸುತ್ತಿರುವ ಕುಟುಂಬಗಳು ಬಹಳ ಸಂಕಷ್ಟಕ್ಕೆ ಒಳಗಾಗಿದ್ದು, ಜಾನುವಾರುಗಳಿಗೆ ಸಮರ್ಪಕವಾದ ನೀರು ಮತ್ತು ಮೇವು ಸಿಗದೆ ಆರೋಗ್ಯ ಸಮಸ್ಯೆಗಳು ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಮೂಲಗಳ ಕೊಳವೆ ಬಾವಿ ಮತ್ತು ತೆರೆದ ಬಾವಿ ಬತ್ತಿ ಹೋಗಿವೆ ಹೀಗಾಗಿ ಕುಡಿಯುವ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.

Tags:

error: Content is protected !!