ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮಾಹಾನಗರಕ್ಕೆ ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಧಾರವಾಡದಲ್ಲಿ ಸಭೆ ನಡೆಸಲಾಯಿತು.

ನಗರದ ಸರ್ಕ್ಯೂಟ್ ಹೌಸನಲ್ಲಿ ಧಾರವಾಡ ಪ್ರತ್ಯೇಕ ಮಾಹಾನಗರ ಪಾಲಿಕೆಯ ಹೋರಾಟಗಾರರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಭೆ ನಡೆಸಿದರು. ಈಗಾಗಲೇ ರಾಜ್ಯ ಸರ್ಕಾರ ಧಾರವಾಡಗೆ ಪ್ರತ್ಯೇಕ ಪಾಲಿಕೆ ಕೊಡುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೋರಾಟಗಾರರಿಗೆ ವಿವರಿಸಿದ್ದರು. ಈ ವೇಳೆ ಸಭೆಯಲ್ಲಿ ಮಾತನಾಡಿದ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿಯವರು, ಈಗಾಗಲೇ ರಾಜ್ಯ ಸರ್ಕಾರ ಪ್ರತ್ಯೇಕ ಮಹಾನಗರ ಪಾಲಿಕೆಗೆ ಅಗತ್ಯ ಕ್ರಮ ಕೈಗೊಂಡಿರುವುದು ಒಳ್ಳೆಯದು, ಆದರೆ ಅಂತಿಮವಾಗಿ ರಾಜ್ಯಪಾಲರು ಅಂಕಿತ ಹಾಕದೇ ವಿಳಂಬ ಮಾಡುತ್ತಿರುವುದು ಸರಿಯಲ್ಲ. ರಾಜಕೀಯ ಲಾಭವಿಟ್ಟುಕೊಂಡು ಪ್ರತ್ಯೇಕ ಪಾಲಿಕೆ ವಿರೋಧಿಸುತ್ತಿರುವುದು ಸರಿಯಲ್ಲ. ಪ್ರತ್ಯೇಕ ಪಾಲಿಕೆಯಿಂದ ಹುಬ್ಬಳ್ಳುಗೆ ಯಾವುದೇ ತೊಂದರೆ ಆಗುವುದಿಲ್ಲ. ಧಾರವಾಡ ನಗರ ಅಭಿವೃದ್ಧಿಗಾಗಿ ಪ್ರತ್ಯೇಕ ಪಾಲಿಕೆ ತುಂಬಾ ಅವಶ್ಯವಾಗಿದೆ. ಹಾಗಾಗಿ ಇದೂ ಆಗಲೇಬೇಕು, ಒಂದಯ ವೇಳೆ ರಾಜ್ಯಪಾಲರು ವಿಳಂಬ ಮಾಡುತ್ತಾ ಹೋದಲ್ಲಿ ಧಾರವಾಡ ಬಂದ್ ಮಾಡಿ ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸಭೆಯಲ್ಲಿ ಪ್ರಮುಖರ ಎಚ್ಚರಿಕೆ ನೀಡಿದರು.

