ಭಾರತೀಯ ರೈಲ್ವೆ ಹಾಗೂ ನೈಋತ್ಯ ರೈಲ್ವೆ ವಿರುದ್ಧ ಮತ್ತೆ ಕನ್ನಡಿಗರು ಸಿಡಿದೆದ್ದಿದ್ದಾರೆ. ಮತ್ತೆ ರೈಲ್ವೆ ಇಲಾಖೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹೋರಾಟದ ಕಿಚ್ಚು ಹೊತ್ತಿಸಿದ್ದಾರೆ.

ಕನ್ನಡಿಗರಿಗೆ ರೈಲ್ವೆ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಘೋರ ಅನ್ಯಾಯ ಮಾಡಿದ ರೈಲ್ವೆ ಇಲಾಖೆ ಎಂದು ರೈಲ್ವೆ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಹೌದು.. ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಹೋರಾಟ ನಡೆಸಲಾಗುತ್ತಿದ್ದು, ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಹೋರಾಟಕ್ಕೆ ತೀರ್ಮಾನ ಮಾಡಿ ರೈಲ್ವೆ ಇಲಾಖೆಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಕರವೇ ಕಾರ್ಯಕರ್ತರಿಂದ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಲು ಪಾದಯಾತ್ರೆ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಬಡ್ತಿಗಾಗಿ ನಡೆಯುವ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ಸಿಗುತ್ತಿಲ್ಲ. ಪ್ರತಿಭಟನೆ ಮಾಡಿದ ತಕ್ಷಣ ಪರೀಕ್ಷೆ ರದ್ದು ಮಾಡಿ ಮುಂದೂಡುತ್ತಾರೆ. ಮತ್ತೆ ಅದೇ ತರಹ ಚಾಳಿ ಮುಂದುವರಿಸಿದ್ದಾರೆ. ಹೀಗಾಗಿ ಕನ್ನಡಿಗರಿಗೆ ಸಮಾನ ಅವಕಾಶ ದೊರೆಯಬೇಕೆಂದು ಪ್ರತಿಭಟನೆ ನಡೆಸಿದರು.
