Chikkodi

ವಿದ್ಯುತ್ ಪರಿವರ್ತಕ ಸ್ಥಳಾಂತರಕ್ಕೆ ರೈತರ ಆಕ್ರೋಶ: ಜೈನಾಪುರದಲ್ಲಿ ಪ್ರತಿಭಟನೆ

Share

ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಕೆಳಗಿನಮನಿ ತೋಟದಲ್ಲಿದ್ದ ವಿದ್ಯುತ್ ಪರಿವರ್ತಕವನ್ನು (ಟ್ರಾನ್ಸ್‌ಫಾರ್ಮರ್) ಬೇರೆಡೆಗೆ ಸ್ಥಳಾಂತರಿಸಿದ್ದರಿಂದ ಕುಡಿಯುವ ನೀರು ಮತ್ತು ಕೃಷಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ರೈತರು ಪ್ರತಿಭಟನೆ ನಡೆಸಿದರು.

ಈ ಭಾಗದ ತೋಟಗಳಲ್ಲಿ 11 ಬಾವಿ ಹಾಗೂ 4 ಕೊಳವೆ ಬಾವಿಗಳಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಂಡಿರುವುದರಿಂದ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷರಾದ ಈರಗೌಡ ಕೆಳಗಿನಮನಿ ಮಾತನಾಡಿ, “ವಿದ್ಯುತ್ ಇಲ್ಲದೆ 30ಕ್ಕೂ ಹೆಚ್ಚು ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ವಿಳಂಬವಾಗಿದೆ. ಕೂಡಲೇ ವಿದ್ಯುತ್ ಪರಿವರ್ತಕ ಅಳವಡಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಸೆಕ್ಷನ್ ಆಫೀಸರ್ ಆರ್. ಬಿ. ಪಾಟೀಲ ಅವರು ಶೀಘ್ರದಲ್ಲೇ ವಿದ್ಯುತ್ ಪರಿವರ್ತಕ ಅಳವಡಿಸುವ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದರು. ಈ ಸಂದರ್ಭದಲ್ಲಿ ರೈತರಾದ ಸುನಿಲ ಖಾನಾಪುರೆ, ಅಜಿತ್ ಕೆಳಗಿನಮನಿ, ರಮೇಶ ಖಾನಾಪುರೆ, ಮಾದೇವ ಮಠಪತಿ, ಲಗಣ್ಣ ಕುಂಬಾರ, ಅಪ್ಪಣ್ಣ ಭಾಕರೆ, ಸತ್ಯಗೌಡ ಬಾಕರೆ, ಮಲ್ಕಯ್ಯ ಮಠಪತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:

error: Content is protected !!