hubbali

ನೀಟ್ ಅಕ್ರಮ – ಜೋಶಿ ಮನೆಗೆ ಮುತ್ತಿಗೆ ಯತ್ನ, ಯೂತ್ ಕಾಂಗ್ರೆಸ್ ಆಕ್ರೋಶ!

Share

NEET ಪರೀಕ್ಷೆ ಪ್ರಶ್ನೆ ಸೋರಿಕೆ ವಿರೋಧಿಸಿ, ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಆರಂಭಿಸಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದರು.

ನಗರದ ಕೇಶ್ವಾಪುರ ರಮೇಶ ಭವನದಿಂದ ಆರಂಭವಾದ ಪ್ರತಿಭಟನೆ, ಪ್ರಹ್ಲಾದ ಜೋಶಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ಮಾರ್ಗ ಮಧ್ಯೆ ಪ್ರತಿಭಟನಾಕಾರರನ್ನು ತಡೆ ಪೊಲೀಸರು, ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಅಷ್ಟೇ ಅಲ್ಲದೆ ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಾಡಿದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Tags:

error: Content is protected !!