Dharwad

ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದನ್ನು ಪ್ರಶ್ನಿಸುವಂತಾಗಬೇಕು -ಸಚಿವ ಸಂತೋಷ ಲಾಡ್

Share

ಕೇಂದ್ರ ಸರಕಾರದ ವೈಫಲ್ಯದಿಂದಾಗಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದನ್ನು ಪ್ರಶ್ನಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಯುವ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಧಾರವಾಡದಲ್ಲಿ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಹೋರಾಟ ನಡೆಸಿದ ರೀತಿಯಲ್ಲಿಯೇ ಹೋರಾಟ ನಡೆಸಬೇಕು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಮಸುಕಾಗಿದೆ. ಈಗ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯುವ ಅನಿವಾರ್ಯತೆ ಎದುರಾಗಿದೆ. ಕಳೆದ 10 ವರ್ಷಗಳಲ್ಲಿ 89 ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಸೋರಿಕೆಯಾಗಿದ್ದು, ಅವುಗಳಲ್ಲಿ 21 ಕೇಂದ್ರ ಸರಕಾರದ ಅಧೀನ ಸಂಸ್ಥೆಗಳು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಕೇಂದ್ರ ಸಚಿವರಾರೂ ಚಕಾರ ಎತ್ತುತ್ತಿಲ್ಲ ಎಂದು ನುಡಿದರು. ರಾಜ್ಯ ಕಾಂಗ್ರೆಸ್‌ ಸರಕಾರ ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕುತ್ತಿಲ್ಲ. ಉದ್ಯೋಗಾಕಾಂಕ್ಷಿಗಳ ಬೇಡಿಕೆ ಈಡೇರಿಸುವಲ್ಲಿ ಕಾರ್ಯನಿರತವಾಗಿದೆ. ಪ್ರಜಾಪ್ರಭುತ್ವದಲ್ಲಿ ಬೇಡಿಕೆಗಾಗಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾರ ವಿರುದ್ಧ ಹೋರಾಟ ಮಾಡಿದರೂ ಅದನ್ನು ಸ್ವಾಗತಿಸಬೇಕು. ಪ್ರಧಾನಮಂತ್ರಿ ಕೌಶಲ್ಯ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ. 2015 ರಿಂದ 2025 ರವರೆಗೆ ಜಾರಿಯಲ್ಲಿದ್ದ ಯೋಜನೆಯಲ್ಲಿ 1.1ಕೋಟಿ ಜನರಿಗೆ ಕೌಶಲ್ಯ ತರಬೇತಿ ನೀಡಲು 14,500 ಕೋಟಿ ರೂ. ಖರ್ಚು ಮಾಡಲಾಗಿದೆ. 12,122 ಖೆಟ್ಟಿ ಖಾತೆಗಳನ್ನು ಸೃಷ್ಟಿಸಿ ಹಣದ ವಹಿವಾಟು ಮಾಡಲಾಗಿದೆ ಎಂಬುದನ್ನು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ ಎಂದರು.

Tags:

error: Content is protected !!