Vijaypura

ಕೃಷಿ ಪ್ರಾಯೋಗಿಕ ಪರೀಕ್ಷೆ ತನಿಖೆಗೆ ರೈತ ಸಂಘ ಆಗ್ರಹ

Share

ಇತ್ತೀಚೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕೇಂದ್ರದಲ್ಲಿ 2026ರ ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ವಿಜಯಪುರ ನಗರದಲ್ಲಿ ಶನಿವಾರ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ 74 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಸಂಘಟನೆಗಳು ಆಗ್ರಹಿಸಿದರು. ಇನ್ನೂ ವಿದ್ಯಾರ್ಥಿನಿ‌ ಲಾವಣ್ಯ ಮಾತನಾಡಿ ರಾಜ್ಯದ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಕೃಷಿ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಧಾರವಾಡ ಮತ್ತು ಕಲಬುರ್ಗಿಯಲ್ಲಿ ತಲಾ ಇಬ್ಬರು ಹಾಗೂ ಮೂವರು ಅಭ್ಯರ್ಥಿಗಳು ಗರಿಷ್ಠ ಅಂಕ ಪಡೆದಿದ್ದಾರೆ. ಆದರೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪರೀಕ್ಷಾ ಕೇಂದ್ರದಲ್ಲಿ 74 ಜನ ಅಭ್ಯರ್ಥಿಗಳು ಔಟ್ ಆಫ್ ಔಟ್ ಪಡೆದಿರುವುದು ಅನುಮಾನ ಮೂಡಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

Tags:

error: Content is protected !!