State

ತೈಲ ಬೆಲೆ ಏರಿಕೆ ವಿರುದ್ಧ ಪ್ರಧಾನಿ ಮೋದಿ ಮುಖಂಡತ್ವಕ್ಕೆ ಖರ್ಗೆ ವಾಗ್ದಾಳಿ

Share

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನೈಜ ಸತ್ಯವನ್ನು ಜನರಿಂದ ಮುಚ್ಚಿಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಚುನಾವಣೆ ಮುಗಿದ ಬಳಿಕ ತೈಲ ಬೆಲೆಯನ್ನು ಹೆಚ್ಚಿಸುವ ಬದಲು, ಧೈರ್ಯವಿದ್ದರೆ ಚುನಾವಣೆಗಿಂತ ಮುಂಚೆಯೇ ಮೋದಿ ಈ ನಿರ್ಧಾರವನ್ನು ಪ್ರಕಟಿಸಬೇಕಿತ್ತು. ಆದರೆ ಇದರ ನೇರ ಪರಿಣಾಮ ಚುನಾವಣೆಯ ಫಲಿತಾಂಶದ ಮೇಲೆ ಬೀರುತ್ತದೆ ಎಂಬ ಭಯದಿಂದಲೇ ಅವರು ಈ ನೀತಿಯನ್ನು ಅನುಸರಿಸಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಇಂತಹ ಜನವಿರೋಧಿ ನೀತಿಗಳಿಂದಾಗಿ ದೇಶದ ಬಡ ಜನರಿಗೆ ಸಿಗಬೇಕಾದ ಅಗತ್ಯ ಸೌಲಭ್ಯಗಳು ಮತ್ತು ಸಬ್ಸಿಡಿಗಳು ಕೂಡ ಸರಿಯಾಗಿ ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಖರ್ಗೆ, ಈ ಬಾರಿ ದೇಶದ ಬಡವರು ಮತ್ತು ಸಾಮಾನ್ಯ ಜನತೆಯ ಹಿತದೃಷ್ಟಿಯಿಂದ ತೈಲ ಬೆಲೆ ಏರಿಕೆ ಹಾಗೂ ಕೇಂದ್ರದ ತಾರತಮ್ಯ ನೀತಿಯ ವಿರುದ್ಧ ಸಂಸತ್ತಿನಲ್ಲಿ ಬಲವಾಗಿ ಧ್ವನಿ ಎತ್ತುವುದಾಗಿ ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!