Vijaypura

ಸರ್ಕಾರ ಶಿಕ್ಷಣ ಇಲಾಖೆ ಹಾಳು ಮಾಡಲು ಹೊರಟಿದೆ; ಮಾಜಿ ಎಮ್‌ಎಲ್ಸಿ ಅರುಣ ಶಹಾಪುರ

Share

ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಇನ್ನೂ ಸಿದ್ಧಪಡಿಸಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಆರೋಪಿಸಿದರು. ವಿಜಯಪುರದಲ್ಲಿ ಸೋಮವಾರದಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಅರುಣ್ ಶಾಹಪುರ್ ಮಾದ್ಯಮಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಒಂದು ವಾರದಲ್ಲಿ ಶಾಲೆಗಳಿಗೆ ಇವುಗಳನ್ನು ಪೂರೈಸಬೇಕಿದ್ದರೂ, ಸರ್ಕಾರ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳದೆ ಶಿಕ್ಷಣ ಇಲಾಖೆಯನ್ನು ನಾಶ ಮಾಡುತ್ತಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ವಿಜಯಪುರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!