• ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ
• ಹೆಚ್ಚಿನ ಸಿಬ್ಬಂದಿ ನೇಮಕಾತಿಗೆ ಆಗ್ರಹಿಸಿ ಎನ್‌ಸಿಪಿ ಪ್ರತಿಭಟನೆ
• ಗುತ್ತಿಗೆ ನೌಕರರಿಗೆ ಪ್ರತಿ ತಿಂಗಳು ಸರಿಯಾಗಿ ವೇತನ ನೀಡಿ
• ಸಮಸ್ಯೆ ಬಗೆಹರಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ದುರ್ಗೇಶ್ ಮೇತ್ರಿ

ಆಂಕರ್: ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ತೀವ್ರ ಕೊರತೆ ಎದುರಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯರನ್ನು ನೇಮಿಸಬೇಕು ಹಾಗೂ ಗುತ್ತಿಗೆ ಸಿಬ್ಬಂದಿಗೆ ಸರಿಯಾಗಿ ವೇತನ ನೀಡಬೇಕೆಂದು ಆಗ್ರಹಿಸಿ ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಿಸಬೇಕೆಂದು ಶರದ್ ಪವಾರ್ ಅವರ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆಯನ್ನು ನಡೆಸಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ರಾಜ್ಯದ 2ನೇ ರಾಜಧಾನಿ ಎನಿಸಿಕೊಳ್ಳುವ ಬೆಳಗಾವಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಮಹಾರಾಷ್ಟ್ರ, ಗೋವಾದಿಂದಲೂ ಇಲ್ಲಿಗೆ ರೋಗಿಗಳು ಆಗಮಿಸುತ್ತಾರೆ. ಆದರೇ, ಅಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅಲ್ಲಿ ವೈದ್ಯರ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ. ಈ ಸಮಸ್ಯೆಯನ್ನು ನೀಗಿಸಬೇಕು. ಅದರಂತೆ ಗುತ್ತಿಗೆ ಆಧಾರದ ಮೇಲೆ ಸೇವೆಗೆ ನೇಮಿಸಿಕೊಂಡ ಸಿಬ್ಬಂದಿಗೆ ಪ್ರತಿ ತಿಂಗಳು ಸರಿಯಾಗಿ ವೇತನವನ್ನು ನೀಡಬೇಕು. ಸಮಸ್ಯೆಗಳನ್ನು ಬೇಗನೆ ನೀಗಿಸಿ ಜನರಿಗೆ ಸಮಪರ್ಕ ಸೇವೆಯನ್ನು ನೀಡಬೇಕೆಂದು ದುರ್ಗೇಶ್ ಮೇತ್ರಿ ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜು ಪಾಟೀಲ್, ಮಹಾಂತೇಶ ಕೋಳುಚೆ, ರಮೇಶ್ ಚೌಗಲೆ, ವೈಭವ ಕುಟ್ರೆ, ಪ್ರಶಾಂತ್ ಮರಗಾಳೆ ಇನ್ನುಳಿದವರು ಭಾಗಿಯಾಗಿದ್ದರು.
