• ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನ ಹೈಡ್ರಾಮಾ
• ಹೈಟೆನ್ಷನ್ ವಿದ್ಯುತ್ ಕಂಬವೇರಿದ ಪ್ರೇಮಿ!
• ಬೆಚ್ಚಿಬಿದ್ದ ಆನೇಕಲ್ ತಾಲೂಕಿನ ಜನತೆ
• ಕೊನೆಗೂ ಸುಖಾಂತ್ಯ ಕಂಡ ಹೈಡ್ರಾಮಾ

ಬೆಂಗಳೂರು(ಆನೇಕಲ್)

ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದ ಯುವಕನೊಬ್ಬ ತನ್ನ ಪ್ರೇಮಿ ಮದುವೆಗೆ ನಿರಾಕರಿಸಿದ ಕಾರಣಕ್ಕೆ ಎತ್ತರದ ಹೈಟೆನ್ಷನ್ ವಿದ್ಯುತ್ ಟವರ್ ಏರಿ ಹೈರಾಣ ಮಾಡಿದ ಘಟನೆ ನಡೆದಿದೆ.
ಈ ಹೈಡ್ರಾಮಾ ಕಂಡು ಸ್ಥಳಕ್ಕೆ ಧಾವಿಸಿದ ಆನೇಕಲ್ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಆತನನ್ನು ಕೆಳಗಿಳಿಸಲು ಕಸರತ್ತು ನಡೆಸಲು ಹರಸಾಹಸ ಪಟ್ಟರೂ ಕೆಲ ಕಾಲದವರೆಗೂ ಹಗ್ಗ ಜಗ್ಗಾಟ ಮುಂದುವರೆದಿದೆ.
ತಾಲೂಕಿನ ಚಿನ್ನಯ್ಯನಪಾಳ್ಯದ ಸೋಮಶೇಖರ್ ಎಂಬಾತನೇ ವಿದ್ಯುತ್ ಕಂಬದ ಮೇಲೇರಿ ಹೈಡ್ರಾಮಾ ನಡೆಸಿದ ಯುವಕನಾಗಿದ್ದಾನೆ.
ಕಳೆದ 3 ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಸೋಮಶೇಖರ್.
ಮದುವೆ ನಿರಾಕರಿಸಿದ ಯುವತಿ ಲವ್ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಮನನೊಂದು ಟವರ್ ಏರಿದ ಪಾಗಲ್.
ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ.
ಸ್ಥಳೀಯ ಮೂಲಗಳ ಪ್ರಕಾರ, ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ಯುವತಿಯು ಮದುವೆಗೆ ನಿರಾಕರಿಸಿ, ಪ್ರೇಮ ಸಂಬಂಧಕ್ಕೆ ಅಂತ್ಯ ಹಾಡಿದ್ದಳು. ಇದರಿಂದ ತೀವ್ರ ಆಕ್ರೋಶಗೊಂಡ ಸೋಮಶೇಖರ್, ಮೊದಲು ತನ್ನ ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ದಾಂಧಲೆ ನಡೆಸಿದ್ದ. ಬಳಿಕ ಅದೇ ಆಕ್ರೋಶದಲ್ಲಿ ಮನೆ ಸಮೀಪದ ಇದ್ದ ಹೈಟೆನ್ಷನ್ ವಿದ್ಯುತ್ ಟವರ್ ಮೇಲೇರಿದ್ದಾನೆ.
‘ ಪ್ರೀತಿಸಿದ ಹುಡುಗಿ ಸ್ಥಳಕ್ಕೆ ಬರುವವರೆಗೂ ತಾನು ಯಾವುದೇ ಕಾರಣಕ್ಕೂ ಕೆಳಗೆ ಇಳಿಯುವುದಿಲ್ಲ’ ಎಂದು ಕಂಬದ ಮೇಲಿಂದಲೇ ಕಿರುಚಾಡಿದ್ದಾನೆ.
ಪ್ರೀತಿಸಿದ ಹುಡುಗಿ ಮತ್ತು ತಾಳಿ ಹರಿಶಿಣ ಕುಂಕುಮ ಹಿಡಿದು ಸ್ಥಳಕ್ಕೆ ಕರೆಸಿದ ಆನೇಕಲ್ ಪೊಲೀಸರು ಹಾಗು ಹುಡುಗಿ ಪೋಷಕರು ಹುಡುಗನ ಹೈಡ್ರಾಮ ಸುಖಾಂತ್ಯಗೊಳಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಕಂಬದ ಸುತ್ತಲೂ ನೂರಾರು ಗ್ರಾಮಸ್ಥರು ಜಮಾಯಿಸಿದ್ದು, ಯುವಕನಿಗೆ ತಿಳಿಹೇಳಿ ಕೆಳಗಿಳಿಸಲು ಶತಪ್ರಯತ್ನ ನಡೆಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಎಷ್ಟೇ ಮನವೊಲಿಸಿದರೂ ಯುವಕ ಮಾತ್ರ ಕೆಳಗಿಳಿಯಲು ಒಪ್ಪದೆ ಹಠ ಹಿಡಿದಿದ್ದಾನೆ. ಕಂಬದಲ್ಲಿ ಹೈವೋಲ್ಟೇಜ್ ವಿದ್ಯುತ್ ಪ್ರವಹಿಸುವ ಆಪಾಯವಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸುವುದು ಎಲ್ಲರಿಗೆ ತಲೆನೋವಾಗಿ ಪರಿಣಮಿಸಿದೆ.
