ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆ ಮೇಲೆ ತಹಶಿಲ್ದಾರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ.


ಹೌದು ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಸ್ ನಿಲ್ದಾಣದ ಪಕ್ಕದ ಶೆಟರ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಪಡಿತರ ಅಕ್ಕಿ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು,ತಕ್ಷಣ ಮುಧೋಳ ತಹಶಿಲ್ದಾರ ಚಿಕ್ಕಪ್ಪ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದು,ದಾಳಿ ವೇಳೆ 114 ಚೀಲಗಳಲ್ಲಿ ತುಂಬಿದ ಸುಮಾರು 55-60 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಅಕ್ರಮ ಪಡಿತ ಅಕ್ಕಿ ದಾಸ್ತಾನು ಸಂಗ್ರಹಿಸಿಟ್ಟವರ ಯಾರು? ಎನ್ನುವುದರ ತನಿಖೆಯನ್ನ ಪೊಲೀಸರು ಮುಂದುವರೆಸಿದ್ದಾರೆ….

