Belagavi

ಅಥಣಿ ಹೊರವಲಯದಲ್ಲಿ ಭೀಕರ ದುರಂತ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ 16 ವರ್ಷದ ಬಾಲಕ ನೀರುಪಾಲು!

Share

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಸಮರ್ಥ ಪನಾಳಕರ (16) ಮೃತ ಬಾಲಕನಾಗಿದ್ದಾನೆ. ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮೃತದೇಹಕ್ಕಾಗಿ ಶೋಧ ಕಾರ್ಯ ಕೈಗೊಂಡರು.ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,

ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:

error: Content is protected !!