ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಡಿಸೇಲ್‌ಗೆ ಭಾರೀ ಬೇಡಿಕೆ ಉಂಟಾಗಿದ್ದು, ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ರೈತರು ಹಾಗೂ ವಾಹನ ಸವಾರರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ಟ್ರಾಕ್ಟರ್‌ಗಳನ್ನು ಸಾಲಾಗಿ ನಿಲ್ಲಿಸಿ ರೈತರು ಡಿಸೇಲ್ ಪಡೆಯಲು ಕಾಯುತ್ತಿದ್ದರೆ, ಇನ್ನೊಂದೆಡೆ ದೊಡ್ಡ ದೊಡ್ಡ ಪ್ಲಾಸ್ಟಿಕ್ ಕ್ಯಾನ್‌ಗಳನ್ನು ಇಟ್ಟು ಜನರು ಸರದಿ ಹಿಡಿದ ದೃಶ್ಯ ಕಂಡುಬಂದಿತು.


ಉತ್ತಮ ಮಳೆಯಾದ ಹಿನ್ನೆಲೆ ರೈತರು ಉಳುಮೆ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದು, ಡಿಸೇಲ್ ಬೇಡಿಕೆ ಏಕಾಏಕಿ ಹೆಚ್ಚಾಗಿದೆ. ಆದರೆ ತಾಳಿಕೋಟೆ ಭಾಗದಲ್ಲಿ ಡಿಸೇಲ್ ಅಭಾವ ಉಂಟಾಗಿರುವುದರಿಂದ ಜನರು ಪರದಾಡುವಂತಾಗಿದೆ. ಸ್ಥಳದಲ್ಲಿ ಯಾವುದೇ ಗಲಾಟೆ ನಡೆಯದಂತೆ ಪೊಲೀಸ್ ಬಂದೋಬಸ್ತ ಕೂಡ ಏರ್ಪಡಿಸಲಾಗಿತ್ತು. ಇದೇ ವೇಳೆ ಕಳೆದ 10 ದಿನಗಳಲ್ಲಿ ಪೆಟ್ರೋಲ್ ಬೆಲೆ ಮೂರು ಬಾರಿ ಏರಿಕೆ ಯಾಗಿರುವುದು ವಾಹನ ಸವಾರರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಪೆಟ್ರೋಲ್ ದರದಲ್ಲಿ ಸುಮಾರು 7 ರೂ. ಏರಿಕೆಯಾಗಿರುವುದರಿಂದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರು ಆರ್ಥಿಕ ಒತ್ತಡಕ್ಕೆ ಸಿಲುಕಿದ್ದಾರೆ. ದಿನನಿತ್ಯ ವಾಹನ ಬಳಸುವ ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ರೈತರು ಇಂಧನ ದರ ಏರಿಕೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂಗಾರು ಕೃಷಿ ಚಟುವಟಿಕೆಗಳ ನಡುವೆ ಡಿಸೇಲ್ ಕೊರತೆ ಹಾಗೂ ಪೆಟ್ರೋಲ್ ದರ ಏರಿಕೆ ಜನರಿಗೆ ಡಬಲ್ ಶಾಕ್ ನೀಡಿದಂತಾಗಿದೆ.


