Vijaypura

ರಾಜ್ಯದಲ್ಲಿ ಮೇ 29ರವರೆಗೆ ಮಳೆ: ವಿಜಯಪುರ ಜಿಲ್ಲೆಯಲ್ಲಿಯೂ ಆರೆಂಜ್ ಅಲರ್ಟ್

Share

ರಾಜ್ಯದಲ್ಲಿ ಮೇ 29ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೇ 27ರವರೆಗೆ ಗಾಳಿ ಸಹಿತ ಮಳೆಯಾಗಲಿದ್ದು, ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಮೇ 25ರಂದು ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಬೀಳುವ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಚಿತ್ರದುರ್ಗ, ತುಮಕೂರು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Tags:

error: Content is protected !!