ಬಿಸಿಲ ನಾಡು, ಗುಮ್ಮಟನಗರಿ ಅಂತಲೇ ಪ್ರಖ್ಯಾತಿ ಪಡೆದುಕೊಂಡ ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಒಟ್ಟು 7 ದಿನಗಳ ಕಾಲ ಆಯೋಜನೆ ಮಾಡಲಾದ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 751 ಜನ ಕ್ರೀಡಾಪಟುಗಳು ಆಗಮಿಸಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ. ಈ ಕುರಿತಾದ ಒಂದು ಕಂಪ್ಲೀಟ್ ವರದಿ ಇಲ್ಲಿದೆ ನೋಡಿ…


ಹೌದು ಗುಮ್ಮಟ ನಗರಿ ಅಂತಾ ಪ್ರಖ್ಯಾತಿ ಪಡೆದುಕೊಂಡ ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಮೇ 17 ರಿಂದ 23 ರ ವರೆಗೆ ಈ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಬಿಎಲ್ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ 751 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇವರೊಟ್ಟಿಗೆ ಪೋಷಕರು ಸೇರಿದಂತೆ ಕೋಚ್ ಗಳು ಹೀಗೆ ಸುಮಾರು 2500 ಕ್ಕೂ ಅಧಿಕ ಜನ ಆಗಮಿಸಿದ್ದರು. ಈ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದ ಆಟಗಾರರು ಪಾಲ್ಗೊಂಡಿದ್ದರು. ಇನ್ನೂ ಕ್ರೀಡಾಕೂಟಕ್ಕೆ ಎಲ್ಲರಿಂದಲೂ ಉತ್ತಮ ಸಹಕಾರ ಸಿಕ್ಕಿದೆ ಎಂದು ಕುಮಾರ ಬಂಗಾರಪ್ಪ ಹೇಳಿದರು…

ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬ್ಯಾಡ್ಮಿಂಟನ್ ಕ್ರೀಡಾ ಚಟುವಟಿಕೆಗಳು ಗರಿಗೆದರಿವೆ. ಕ್ರೀಡಾ ಚಟುವಟಿಕೆಗಳು ಹೊಸ ಸ್ವರೂಪ ಸಿಕ್ಕಂತಾಗಿದೆ. ಇನ್ನೂ ಇಲ್ಲಿ ಆಯೋಜನೆ ಮಾಡಲಾದ ಕ್ರೀಡಾಕೂಟದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ, ಇದು ನಿಜಕ್ಕೂ ಮಾದರಿ ಕ್ರೀಡಾಕೂಟ ಎಂದು ಕ್ರೀಡಾಪಟುಗಳು ಜೊತೆಗೆ ಜಿಲ್ಲಾಧಿಕಾರಿ ಹೇಳಿದರು. 7 ದಿನಗಳ ಕಾಲ ಈ ಬ್ಯಾಡ್ಮಿಂಟನ್ ಕ್ರೀಡೆ ಆಯೋಜನೆ ಮಾಡಿದ್ದು ಇದಕ್ಕೆ ಎಲ್ಲರ ಸಹಕಾರ ಇದೆ. ಈ ಕ್ರೀಡೆಯಿಂದ ವಿಜಯಪುರ ನಗರಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ. ಸುಮಾರ 10 ವಿಭಾಗದಲ್ಲಿ ಆಯೋಜನೆ ಮಾಡಲಾದ ಕ್ರೀಡಾಕೂಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು…
ಒಂದು ವಾರಗಳ ನಡೆದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಎಲ್ಲ ರೀತಿಯ ವ್ಯವಸ್ಥೆ ಜಿಲ್ಲಾಡಳಿತ ಸೇರಿದಂತೆ ಸಂಘ ಸಂಸ್ಥೆಗಳಿಂದ ಮಾಡಲಾಗಿತ್ತು. ಇಂತಹ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಜಿಲ್ಲೆಗೆ ಹೆಮ್ಮೆ ಹಾಗೂ ಕೀರ್ತಿಯನ್ನು ತಂದಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ರಾಜ್ಯ ಮಟ್ಟದ ಕ್ರೀಡಾಕೂಟ ಗಳು ವಿಜಯಪುರ ಜಿಲ್ಲೆಯಲ್ಲಿ ಆಯೋಜನೆ ಮಾಡುವಂತಾಗಲಿ ಎಂದು ಜಿಲ್ಲೆಯ ಜನತೆಯ ಒತ್ತಾಯವಾಗಿದೆ.
