FARMER

ಕೆರೆಗೆ ನೀರು ತುಂಬಿಸುವಂತೆ ರೈತ ಸಂಘದಿಂದ ಪ್ರತಿಭಟನೆ

Share

ವಿಜಯಪುರ ಜಿಲ್ಲೆಯ ಆಹೇರಿ, ಜಂಬಗಿ ಹಾಗೂ ನಾಗಠಾಣ ಕೆರೆಗಳಿಗೆ ಕೂಡಲೇ ನೀರು ತುಂಬಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಕಣಕ್ಕಿಳಿದ ನೂರಾರು ರೈತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆಯನ್ನು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸಲಾಯಿತು. ಜಿಲ್ಲೆಯ ಆಹೇರಿ, ಜಂಬಗಿ, ನಾಗಠಾಣ ಕೆರೆಗಳಿಗೆ ನೀರು ತುಂಬಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಬೇಸಿಗೆಯಲ್ಲಿ ಜನ- ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಕೆರೆಗಳಿಗೆ ನೀರು ಹರಿಸಬೇಕು ಎಂದು ಗ್ರಾಮಸ್ಥರು ಹಾಗೂ ರೈತ ಮುಖಂಡರು ಒತ್ತಾಯಿಸಿದರು.

Tags:

error: Content is protected !!