ಆ್ಯಂಕರ್: ಯುವಕನೊಬ್ಬ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಡೆದಿದೆ.


ಮೃತ ಯುವಕ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ರವಿಚಂದ್ರ ಮಾದರ (25) ಎಂದು ಗುರುತಿಸಲಾಗಿದೆ. ರವಿಚಂದ್ರ ಗುತ್ತಿಗೆದಾರ ಎಂ ಎಸ್ ಪೂಜಾರಿ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಕೊಲೆ ಮಾಡಿ ನೇಣು ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಬಸವನ ಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

