BELAGAVI

ಬೆಳಗಾವಿ: ಹೋಟೆಲ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಗ್ರಾಮೀಣ ಪೊಲೀಸರ ಭರ್ಜರಿ ದಾಳಿ; ಪ್ರಕರಣ ದಾಖಲು!

Share

ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾವಗಾಂವ್ ರಸ್ತೆಯ ಹೊಟೇಲ್ ಒಂದರ ಮೇಲೆ ಪಿಎಸ್‌ಐ ನೇತೃತ್ವದ ತಂಡ ಸಿನೆಮಾ ಶೈಲಿಯಲ್ಲಿ ದಾಳಿ ನಡೆಸಿ, ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.

ಬೆಳಗಾವಿಯ ಸಾವಗಾಂವ್ ಅಂಗಡಿ ಕಾಲೇಜ್ ಹತ್ತಿರವಿರುವ ಸನ್‌ಫ್ಲಾವರ್ ಹೋಟೆಲ್‌ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮದ್ಯ ಸೇವನೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆಯ ಪಿಎಸ್‌ಐ ಎಲ್. ಎಸ್. ಜೋಡಟ್ಟಿ ಹಾಗೂ ಸಿಬ್ಬಂದಿ ಜಂಟಿ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಮಹಾರಾಷ್ಟ್ರ ಕೊಲ್ಲಾಪುರದ ನಿವಾಸಿ ಸಚಿನ್ ಅರ್ಜುನ ಕಾಂಬಳೆ (26) ಮತ್ತು ಬೆಳಗಾವಿ ಶಹಾಪೂರದ ಪ್ರಶಾಂತ್ ವಿಠಲ ಶಹಾಪೂರಕರ್ ಎಂಬುವವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಆರೋಪಿಗಳಿಂದ ಓಲ್ಡ್ ಮಂಕ್ ರಮ್ ಖಾಲಿ ಬಾಟಲಿಗಳು, ಪ್ಲಾಸ್ಟಿಕ್ ಗ್ಲಾಸ್ ಹಾಗೂ ನೀರಿನ ಬಾಟಲಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವುದು ಕಾನೂನು ಬಾಹಿರ ಎಂದು ತಿಳಿದಿದ್ದರೂ ನಿಯಮ ಉಲ್ಲಂಘಿಸಿದ ಇಬ್ಬರ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 135/2026 ರನ್ವಯ ಅಬಕಾರಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣವೇ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿದ ಪಿಎಸ್‌ಐ ಮತ್ತು ಸಿಬ್ಬಂದಿಯ ಸಮಯಪ್ರಜ್ಞೆಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Tags:

error: Content is protected !!