ಪ್ರಧಾನಿ ನೆಹರು ಅವರ ಪುಣ್ಯತಿಥಿ ನಿಮಿತ್ತ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೀವ್ರ ಕುತೂಹಲ ಮೂಡಿಸಿರುವ ತಮ್ಮ ದೆಹಲಿ ಪ್ರವಾಸ ಹಾಗೂ ಹೈಕಮಾಂಡ್ ಸಭೆಯ ಒಳಸುಳಿಗಳ ಕುರಿತು ನಾಳೆ ಗುರುವಾರ ಎಲ್ಲವನ್ನೂ ಮುಕ್ತವಾಗಿ ಹಂಚಿಕೊಳ್ಳುವುದಾಗಿ ಘೋಷಿಸಿದ್ದಾರೆ.


ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ನಿಮಿತ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಎಂ ಸಿದ್ಧರಾಮಯ್ಯನವರು ಮಾತನಾಡಿದರು. ದೇಶದ ಮೊದಲ ಪ್ರಧಾನಿಗಳಾಗಿ ಜವಾಹರಲಾಲ್ ನೆಹರು ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು. ಪಂಚ ವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಿದರು. ದೇಶವು ವೈಜ್ಞಾನಿಕವಾಗಿ ವೈಚಾರಿಕವಾಗಿ ಪ್ರಗತಿ ಸಾಧಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಅವರನ್ನು ಸ್ಮರಿಸುತ್ತ, ಅವರು ಹಾಕಿಕೊಟ್ಟ ದಾರಿ ಮೇಲೆ ನಡೆಯುವ ಪ್ರಯತ್ನವನ್ನು ಮಾಡುತ್ತೇವೆ ಎಂದರು.

ಇನ್ನು ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಪ್ರಶ್ನೆಗೆ ಉತ್ತರಿಸಿದ ಅವರು, ‘ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ ಗುರುವಾರ ಎಲ್ಲವನ್ನೂ ಮುಕ್ತವಾಗಿ ಮಾತನಾಡುತ್ತೇನೆ’ ಎಂದು ಹೇಳಿದರು. ಆ ಮೂಲಕ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
