State

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

Share

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್ನಲ್ಲಿ ನುಡಿದಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಸಭೆ ನಡೆಸಿದರು. ಸರ್ಕಾರಿ ನಿವಾಸ ಕಾವೇರಿಯಲ್ಲಿ ಈ ಸಭೆಯಲ್ಲಿ, ತಾವು ಸಿಎಂ ಹುದ್ದೆಯಿಂದ ಕೆಳಗಿಳಿಯುವುದಾಗಿ ಅವರು ಪ್ರಕಟಿಸಿದರು.

ಮಂಗಳವಾರ ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಸಭೆಯಲ್ಲಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಸಮ್ಮತಿಸಿದ್ದರು. ರಾಹುಲ್ ಗಾಂಧಿಯವರಿಂದಲೇ ಸಂದೇಶ ಬಂದಿದ್ದರಿಂದ ರಾಜೀನಾಮೆ ನೀಡಲು ನಿರ್ಧರಿಸಿದರು ಎಂದು ಮೂಲಗಳು ಹೇಳಿವೆ.
ಬ್ರೇಕ್ಫಾಸ್ಟ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಚರ್ಚೆ ನಡೆಯಿತು. ಸುಗಮ ಅಧಿಕಾರ ಹಸ್ತಾಂತರ ನಿಟ್ಟಿನಲ್ಲಿ, ಒಗ್ಗಟ್ಟಿನ ಸಂದೇಶ ಸಾರಲು ಹಾಗೂ ಪರಸ್ಪರ ವಿಶ್ವಾಸ ಮೂಡಿಸಲು ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಆಯೋಜನೆಯಾಗಿತ್ತು.
ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಇತರರು ಭಾಗವಹಿಸಿದ್ದರು.

ಮುಂದಿನ‌‌‌ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು ಆಗುತ್ತಾರ ಎನ್ನುವುದನ್ನು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಅವರೇ ಎಲ್ಲ ಮುಂದಿನ ಪ್ರಕ್ರಿಯೆ ನಡೆಸುತ್ತಾರೆ ಎಂದು ಹೇಳಿದರು. ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್‌ ಕಣ್ಣಂಚಲಿ‌ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Tags:

error: Content is protected !!