ಧಾರವಾಡ ಮಹಾನಗರ ಪ್ರತ್ಯೇಕ ಪಾಲಿಕೆ ಹೋರಾಟ ಇಂದು 13ನೇ ದಿನಕ್ಕೆ ಕಾಲಿಟ್ಟಿದ್ದು, ಧಾರವಾಡ ಹೈಕೋರ್ಟ್ ಪೀಠ ಹೋರಾಟ ಖ್ಯಾತಿಯ ಹಾಗೂ ಹಿರಿಯ ನ್ಯಾಯವಾದಿ ಬಿಡಿ ಹಿರೇಮಠ ಅವರು ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಂಗೊಡಿದ್ದಾರೆ. ಇದಕ್ಕೆ ಬಿಜೆಪಿ ಕಾಂಗ್ರೆಸ್ ಸ್ಥಳೀಯ ಪದಾಧಿಕಾರಿಗಳು ಸಾಥ್ ನೀಡಿದ್ದಾರೆ.

ಹೌದು ….ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಧಾರವಾಡ ಕಚೇರಿ ಮುಂಭಾಗದಲ್ಲಿ ಪ್ರತ್ಯೇಕ ಪಾಲಿಕೆಗಾಗಿ ಈಗಾಗಲೇ 12 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಾ ಬಂದಿದ್ದು, ಇಂದು 13ನೇಯ ದುನಕ್ಕೆ ಹೋರಾಟ ಕಾಲಿಟ್ಟಿದೆ. ಜತೆಗೆ ಧಾರವಾಡ ವಿಭಾಗಿಯ ಹೈಕೋರ್ಟ್ ಫೀಠ ಸ್ಥಾಪನೆಯ ಮುಖ್ಯ ಹೋರಾಟಗಾರ ಖ್ಯಾತಿಯ ಹಾಗೂ ಹಿರಿಯ ನ್ಯಾಯವಾದಿಗಳಾದ ಬಿ ಡಿ ಹಿರೇಮಠ ಅವರು ಈಗ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದು, ಈ ಹೋರಾಟಕ್ಕೆ ಪಕ್ಷಾತೀತವಾಗಿ ಬಿಜೆಪಿ ಕಾಂಗ್ರೆಸ್ ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾಥ್ ನೀಡುವ ಮೂಲಕ ಹೋರಾಟವನ್ನು ಪತ್ತಷ್ಟು ತೀವ್ರಗೋಳಿಸಿದ್ದಾರೆ. ಹೆಚ್ ಡಿ ಎಂ ಸಿ ಸಾಕು- ಡಿಎಂಸಿ ಬೇಕು ಎಂದು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರು ಧಾರವಾಡ ನಗರಕ್ಕೆ ಪ್ರತ್ಯೇಕ ಪಾಲಿಕೆ ನೀಡಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

