FIRE

ಮೂಡಲಗಿ: ಭೀಕರ ಅಗ್ನಿ ಅವಘಡಕ್ಕೆ ಕೋಟಿ ಕೋಟಿ ಮೌಲ್ಯದ ಫರ್ನಿಚರ್ ಭಸ್ಮ!

Share

ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿರುವ ಎಸ್‌ಎಂಕೆ ಫರ್ನಿಚರ್ ಅಂಗಡಿಗೆ ಬೆಳ್ಳಂ ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡು ಸುಮಾರು 6 ಕೋಟಿ ರೂ. ಮೌಲ್ಯದ ಆಸ್ತಿ ನಷ್ಟವಾಗಿದೆ.

ಮುಂಜಾನೆ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿವಲಿಂಗ ಪಾಟೀಲ ಅವರಿಗೆ ಸೇರಿದ ಫರ್ನಿಚರ್ ಅಂಗಡಿ ಕ್ಷಣಾರ್ಧದಲ್ಲೇ ಬೆಂಕಿಗಾಹುತಿಯಾಗಿದೆ. ಅಂಗಡಿಯಲ್ಲಿದ್ದ ಫರ್ನಿಚರ್ ಸಾಮಗ್ರಿಗಳು, ಯಂತ್ರೋಪಕರಣಗಳು ಸೇರಿದಂತೆ ಬಹುತೇಕ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಅಂಗಡಿಯ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದ ಕಾರಣ ದೊಡ್ಡ ಅನಾಹುತ ಸಂಭವಿಸುವ ಆತಂಕ ಎದುರಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಘಟನೆ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!