ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಪ್ರಸಿದ್ಧ ಫಡಿಬಸವೇಶ್ವರ ದೇವಸ್ಥಾನದಲ್ಲಿ ಪರಶುರಾಮ್ ಪೂಜೇರಿ ಅವರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸತೀಶ್ ಜಾರಕಿಹೊಳಿ ಅವರಿಗೆ ಉನ್ನತ ಜವಾಬ್ದಾರಿಗಳು ಸಿಗುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ವಿಶೇಷ ಪೂಜೆ ಹಾಗೂ ಅರ್ಚನೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಗಂಗಪ್ಪ ಮಾಸ್ಮಡಿ, ಎಲ್ಲಪ್ಪ ಹಿತ್ತಲಮನಿ, ಚಂದು ತಳವಾರ, ಶಿವು ಮಡ್ಡಿಕರ್, ನಾಗರಾಜ್ ತಳವಾರ್, ದತ್ತು ಕೋಳಿಕೊಪ್ಪ, ಬಸವರಾಜ್ ಮುದುಗಿ, ಕಲ್ಲಪ್ಪ ತಳವಾರ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
