Dharwad

ಧಾರವಾಡದಲ್ಲಿ ಘೋರ ದುರಂತ: ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಜಲಸಮಾಧಿ

Share

ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ತೀವ್ರ ಹදಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಬೇಸಿಗೆಯ ಬೇಗೆ ತಣಿಸಿಕೊಳ್ಳಲು ಕೆರೆಗೆ ಈಜಲು ಹೋಗಿದ್ದ ಮೂವರು ಮುಗ್ಧ ಬಾಲಕರು ನೀರಿನ ಆಳ ತಿಳಿಯದೇ ಕೆರೆಯಲ್ಲೇ ಮುಳುಗಿ ಉಸಿರು ಚೆಲ್ಲಿದ್ದಾರೆ. ಒಂದೇ ಗ್ರಾಮದ ಮೂವರು ಬಾಲಕರು ಸಾವನ್ನಪ್ಪಿರುವುದರಿಂದ ಇಡೀ ಗ್ರಾಮದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ.

ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಮಧ್ಯಾಹ್ನದ ವೇಳೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಮೃತರನ್ನು ಸುಭಾನಿ ಬಾಬೋಜಿಕೊಪ್ಪ (12), ಮೆಹಬೂಬ್ ವಟ್ನಾಳ್ (16) ಹಾಗೂ ಅನ್ವರ ವಟ್ನಾಳ್ (14) ಎಂದು ಗುರುತಿಸಲಾಗಿದೆ. ಈಜಾಡುತ್ತಾ ಕೆರೆಯ ಮಧ್ಯಭಾಗಕ್ಕೆ ತೆರಳಿದ ಬಾಲಕರು, ನೀರಿನ ಆಳ ಹೆಚ್ಚಾಗಿದ್ದರಿಂದ ದಡ ಸೇರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗರಗ ಠಾಣೆಯ ಪೊಲೀಸರು ಸಾರ್ವಜನಿಕರ ನೆರವಿನೊಂದಿಗೆ ಮೂರೂ ಶವಗಳನ್ನು ಹೊರತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Tags:

error: Content is protected !!