Vijaypura

ಹಿರಿಯ ಶಾಸಕ ಶಿವಾನಂದ ಪಾಟೀಲರಿಗೆ ಡಿಸಿಎಂ ಹುದ್ದೆ ನೀಡಬೇಕು: ಸಂಗನಬಸವ ಶ್ರೀ ಒತ್ತಾಯ

Share

ಪಂಚಮಸಾಲಿ ಸಮಾಜದ ಹಿರಿಯ ನಾಯಕ ಹಾಗೂ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಚಿವ ಶಿವಾನಂದ ಎಸ್. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ರಾಜ್ಯ ಸರ್ಕಾರ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಮನಗೂಳಿಯ ವಿರಕ್ತಮಠದ ಸಂಗನಬಸವ ಶ್ರೀಗಳು ಆಗ್ರಹಿಸಿದರು. ವಿಜಯಪುರ ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ ಅವರು ದೀರ್ಘ ರಾಜಕೀಯ ಅನುಭವ ಹೊಂದಿದ್ದು, ಜನಪರ ನಾಯಕರಾಗಿ ಗುರುತಿಸಿ ಕೊಂಡಿದ್ದಾರೆ. ಅವರಿಗೆ ಡಿಸಿಎಂ ಹುದ್ದೆ ನೀಡಿದರೆ ಅದು ಪಂಚಮಸಾಲಿ ಸಮಾಜಕ್ಕೆ ಸಂದ ಗೌರವವಾಗಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬೇಡಿಕೆಯನ್ನು ಪರಿಗಣಿಸಿ ಶಿವಾನಂದ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

Tags:

error: Content is protected !!