ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಾವು ಈ ಹಿಂದೆ ನುಡಿದ ಭವಿಷ್ಯ ಇದೀಗ ನಿಜವಾಗಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.


ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶ್ರೀಕ್ಷೇತ್ರ ಯಡೂರಿನಲ್ಲಿ ನಡೆದ ವೀರಶೈವ-ಲಿಂಗಾಯತ ಧರ್ಮೋತ್ಥಾನ ಸಮ್ಮೇಳನ ಹಾಗೂ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧರ್ಮಗುರುಗಳ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ಅಪಾರ ಗೌರವವಿದೆ ಎಂದು ಹೇಳಿದರು.
“ಧರ್ಮಗುರುಗಳನ್ನು ಕಂಡರೆ ಶಿವಕುಮಾರ್ ಅವರು ಬಹಳ ಗೌರವದಿಂದ ನಡೆದುಕೊಳ್ಳುತ್ತಾರೆ. ತಮ್ಮನ್ನೇ ತಾವು ಸಮರ್ಪಿಸಿಕೊಳ್ಳುವ ಗುಣ ಅವರಲ್ಲಿದೆ. ಆ ಕಾರಣದಿಂದ ಅವರನ್ನು ನಾನು ವೈಯಕ್ತಿಕವಾಗಿ ಇಷ್ಟಪಡುತ್ತೇನೆ. ಇದೇ ಕಾರಣಕ್ಕೆ ಅವರು ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಈ ಹಿಂದೆ ಹೇಳಿದ್ದೆ. ಈಗ ಆ ಭವಿಷ್ಯ ನಿಜವಾಗಿದೆ,” ಎಂದು ಸ್ವಾಮೀಜಿ ಹೇಳಿದರು.

ಸ್ವಾಮೀಜಿಯ ಈ ಹೇಳಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಭಕ್ತರು ಹಾಗೂ ಮುಖಂಡರ ಗಮನ ಸೆಳೆಯಿತು. ಡಿ.ಕೆ. ಶಿವಕುಮಾರ್ ಅವರ ನಾಯಕತ್ವ, ಧಾರ್ಮಿಕ ಕ್ಷೇತ್ರದೊಂದಿಗೆ ಹೊಂದಿರುವ ನಂಟು ಹಾಗೂ ಜನಸಂಪರ್ಕದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
