BELAGAVI

ಬೆಳಗಾವಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ: ತಂಬಾಕು ವ್ಯಸನದ ವಿರುದ್ಧ ಭರತೇಶ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಬೀದಿ ನಾಟಕ!

Share

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿಂದೋಳ್ಳಿ ಹಾಗೂ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇವರ ಸಂಯಕ್ತ ಆಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಅಂಗವಾಗಿ ಕಾರ್ಯಕ್ರಮವನ್ನು ಬೆಳಗಾವಿ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಶಿಂದೊಳ್ಳಿಯಲ್ಲಿ ಹಮ್ಮಿಕೊಳ್ಳಲಾಯಿತು.

ಭರತೇಶ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸಾವಿತ್ರಿ ದೊಡ್ಡನ್ನವರ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಮಹತ್ವವನ್ನು ತಿಳಿಸುತ್ತಾ ದುಷ್ಟಟಗಳಿಂದ ದೂರವಿರಲು ತಿಳಿಹೇಳಿದರು. ಮುಂಬರು ದಿನಗಳಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಜಂಟಿಯಾಗಿ ಆಯೋಜಿಸಲು ತಮ್ಮ ಸಂಸ್ಥೆ ವತಿಯಿಂದ ನೀಡುವುದರ ಕುರಿತು ತಿಳಿಸಿದರು. ಪ್ರಾಸ್ತಾವಿಕವಾಗಿ ಡಾ. ಸಂಜಯ ಎಸ್ ದೊಡ್ಡಮನಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ತಂಬಾಕು ನಿಯಂತ್ರಣಾಧಿಕಾರಿಗಳು ಇವರು ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ. ಹೀಗಾಗಿ ಸಾರ್ವಜನಿಕರು ತಂಬಾಕು ಸೇವನೆ ತ್ಯೆಜಿಸಬೇಕು ಎಂದು ಕರೆ ನೀಡಿದರು ಮತ್ತು ತಂಬಾಕು ಸೇವನೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ದುಷ್ಪಟಕ್ಕೆ ಒಳಗಾಗಿ ತಮ್ಮ ಆರೋಗ್ಯವನ್ನು ಹಾಳು ಮಾಡಿಕೋಳ್ಳುತ್ತಿದ್ದಾರೆ ಎಂದು ಮಾತನಾಡಿದರು. ಈ ವರ್ಷದ ಘೋಷವಾಕ್ಯ “ಆಕರ್ಷಣೆಯನ್ನು ಬಹಿರಂಗಪಡಿಸುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು ” ಎಂಬುವುದರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ನಿರ್ದೇಶಕರು ಡಾ. ಅರುನಕುಮಾರ ಜಮದಾಡೆ ಇವರು ಹೊಗೆ ರಹಿತ ತಂಬಾಕು ಸೇವನೆಯಿಂದ ಪರಿಸರದ
ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮದ ಕುರಿತು ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಜಗಿಯುವುದು ಮತ್ತು ಉಗುಳುವುದು ಕಂಡುಬಂದಲ್ಲಿ ದಂಡವನ್ನು ವಿಧಿಸಿ ಕಾನೂನಿನ ಕಠಿಮ ಕ್ರಮ ಕೈಗೊಳ್ಳುವ ಅವಶ್ಯಕತೆ ಇರುವ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ರ್ದೇಶಕರಾದ ಶ್ರೀಕಾಂತ ಕೊಕಂನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರಸಾದ ಹಿರೇಮಠ, ಸಂಗಮನಾಥ ಬಾಳಿಗಟ್ಟಿ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರಕಾಶ ಮಾನೆ, ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಶೇತಾ ಪಾಟೀಲ, ಕುಮಾರಿ ಕವಿತಾ ರಾಜನ್ನವರ ಕಾರ್ಯಕ್ರಮದಲ್ಲಿ ಉಸ್ಥಿತರಿದ್ದರು.
ಭರತೇಶ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ವಿಶ್ವ ತಂಬಾಕು ರಹಿತ ದಿನಚರಣೆಯ ಅಂಗವಾಗಿ ಬೀದಿ ನಾಟಕ, ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಾರ್ಯಕಮವನು. ಪಕಾಶ ಮಾನೆ ನಿರೂಪಿಸಿದರು ಹಾಗೂ ಡಾ: ಶೇತಾ ಪಾಟೀಲ ವಂದಿಸಿದರು.

Tags:

error: Content is protected !!