BELAGAVI

ಬೆಳಗಾವಿ: RPD ಸರ್ಕಲ್ ಯುಜಿಡಿ ಸಮಸ್ಯೆಗೆ ಶಾಸಕ ಅಭಯ ಪಾಟೀಲ್ ಖಡಕ್ ಸೂಚನೆ!

Share

ಬೆಳಗಾವಿಯ ವಾರ್ಡ್ ಸಂಖ್ಯೆ 29ರ ಆರ್ ಪಿ ಡಿ ಸರ್ಕಲ್ ಪರಿಸರದಲ್ಲಿ ಕಳೆದ ಹಲವು ತಿಂಗಳುಗಳಿಂದ ಕಾಡುತ್ತಿದ್ದ ಭೂಗತ ಗಟಾರ (ಯುಜಿಡಿ) ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಸ್ಥಳೀಯರ ದೂರಿಗೆ ತಕ್ಷಣ ಸ್ಪಂದಿಸಿದ ಶಾಸಕ ಅಭಯ ಪಾಟೀಲ್ ಅವರು ಅಧಿಕಾರಿಗಳೊಂದಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ದಕ್ಷಿಣ ಶಾಸಕರಾದ ಅಭಯ ಪಾಟೀಲ್ ಅವರು ನಗರಸೇವಕ ನಿತೀನ್ ಜಾಧವ್ ಹಾಗೂ ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಾರ್ಡ್ ಸಂಖ್ಯೆ 29ರ ಆರ್ ಪಿ ಡಿ ಸರ್ಕಲ್ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಹದಗೆಟ್ಟ ಯುಜಿಡಿ ಸಮಸ್ಯೆಯನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದರು.
ಕಳೆದ ಹಲವು ತಿಂಗಳುಗಳಿಂದ ಈ ಭಾಗದಲ್ಲಿ ಯುಜಿಡಿ ಬ್ಲಾಕ್ ಆಗಿದ್ದರಿಂದ ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ನಾಗರಿಕರಿಗೆ ಸಂಚಾರ ಮಾಡಲು ತೀವ್ರ ತೊಂದರೆಯಾಗುತ್ತಿತ್ತು. ಈ ಗಂಭೀರ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಶಾಸಕ ಅಭಯ ಪಾಟೀಲ್ ಅವರು, ನಾಗರಿಕರ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅಲ್ಲದೇ ಸಾರ್ವಜನಿಕರ ಅನಾನುಕೂಲತೆಯನ್ನು ನಿವಾರಿಸಲು ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

Tags:

error: Content is protected !!